ದೇಶ

ವ್ಯಾಪಾರದ ಉದ್ದೇಶದ ಬಾಡಿಗೆ ತಾಯ್ತನ ನಿಷೇಧಕ್ಕೆ ಕೇಂದ್ರ ಚಿಂತನೆ

ಕೇಂದ್ರ ಸರ್ಕಾರ ಸದ್ಯದಲ್ಲಿಯೇ ವಾಣಿಜ್ಯ ಬಾಡಿಗೆ ತಾಯ್ತನಕ್ಕೆ ನಿಷೇಧ ತರಲು ಹೊರಟಿದೆ. ಅಂದರೆ ವಿದೇಶಿಗರು ಭಾರತದಲ್ಲಿ ಬಾಡಿಗೆ...

ವ್ಯಾಪಾರದ ಉದ್ದೇಶದ ಬಾಡಿಗೆ ತಾಯ್ತನ ನಿಷೇಧಕ್ಕೆ ಕೇಂದ್ರ ಚಿಂತನೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೇಂದ್ರ ಸರ್ಕಾರ ಸದ್ಯದಲ್ಲಿಯೇ ವಾಣಿಜ್ಯ ಬಾಡಿಗೆ ತಾಯ್ತನಕ್ಕೆ ನಿಷೇಧ ತರಲು ಹೊರಟಿದೆ. ಅಂದರೆ ವಿದೇಶಿಗರು ಭಾರತದಲ್ಲಿ ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯುವುದಕ್ಕೆ ಅವಕಾಶ ಸಿಗುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪತ್ರ ಬರೆಯಲಿದೆ.

ಈ ಕುರಿತು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಲಿದ್ದಾರೆ ಎಂದು ಖಚಿತ ಮೂಲಗಳು ತಿಳಿಸಿವೆ.
ಮಕ್ಕಳಿಲ್ಲದ ಭಾರತೀಯ ದಂಪತಿಗಳಿಗೆ ಕಾನೂನು ಮೂಲಕ ಮಕ್ಕಳನ್ನು ಪಡೆಯಲಿರುವ ಅವಕಾಶ ಬಾಡಿಗೆ ತಾಯ್ತನವಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಲಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 2013ರಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ವಿದೇಶಿ ವ್ಯಾಪಾರ ನಿರ್ದೇಶನಾಲಯ ಕಾಯ್ದೆಯನ್ನು ಹಿಂತೆಗೆದುತಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಯಿತು. ಈ ಕಾಯ್ದೆಯಡಿ ಕೃತಕ ಗರ್ಭಧಾರಣೆಗೆ ಮಾನವ ಭ್ರೂಣವನ್ನು ವಿದೇಶಗಳಿಂದ ಮುಕ್ತವಾಗಿ ಆಮದು ಮಾಡಿಕೊಳ್ಳುವ ಅವಕಾಶವಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.