ಸಹ ವಿದ್ಯಾರ್ಥಿಯಿಂದ ಅಶ್ಲೀಲ ಪೋಸ್ಟ್ ರವಾನೆ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಸಹ ವಿದ್ಯಾರ್ಥಿಯೊಬ್ಬ ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್ ವೊಂದನ್ನು ರವಾನಿಸಿದ್ದ ಕಾರಣಕ್ಕೆ 14 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಳಾಗಿರುವ ಘಟನೆಯೊಂದು ಮುಂಬೈನ ಮೀರಾ ರಸ್ತೆಯಲ್ಲಿ ನಡೆದಿದೆ...

ಮುಂಬೈ: ಸಹ ವಿದ್ಯಾರ್ಥಿಯೊಬ್ಬ ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್ ವೊಂದನ್ನು ರವಾನಿಸಿದ್ದ ಕಾರಣಕ್ಕೆ 14 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಳಾಗಿರುವ ಘಟನೆಯೊಂದು ಮುಂಬೈನ ಮೀರಾ ರಸ್ತೆಯಲ್ಲಿ ನಡೆದಿದೆ.
ಬಾಲಕಿಯನ್ನು ಸಹ ವಿದ್ಯಾರ್ಥಿಯೊಬ್ಬ ಹಲವು ದಿನಗಳಿಂದಲೂ ಹಿಂಬಾಲಿಸಿದ್ದಾನೆ. ಇದನ್ನು ಕಂಡ ಬಾಲಕಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬಾಲಕನನ್ನು ಠಾಣೆಗೆ ಕರೆದು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.
ಇದರಿಂದಾಗಿ ಕೋಪಗೊಂಡ ಬಾಲಕ ಬಾಲಕಿಯ ಮೇಲಿದ್ದ ದ್ವೇಷದಿಂದ ಅಶ್ಲೀಲ ಸಂದೇಶಗಳನ್ನು ಆಕೆಯ ಫೇಸ್ ಬುಕ್ ವಾಲ್ ಗೆ ಪೋಸ್ಟ್ ಮಾಡಿದ್ದಾನೆ. ಇದರಿಂದ ತೀವ್ರವಾಗಿ ನೊಂದ ಬಾಲಕಿ ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


