ಸಮುದಾಯಗಳ ನಡುವೆ ಕೋಮುಸಂಘರ್ಷ ಮೂಡಿಸುವುದು ಬಿಜೆಪಿ ಅಜೆಂಡಾ: ರಾಹುಲ್ ಗಾಂಧಿ
ಎನ್ ಡಿ ಎ ಸರ್ಕಾರ ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸಿ, ದ್ವೇಷಾಸೂಯೆ ಬಿತ್ತುವ ಯೋಜನೆ ರೂಪಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

ಪಾಟ್ನಾ: ಕೇಂದ್ರದಲ್ಲಿ ಅಸ್ಥಿತ್ವದಲ್ಲಿರುವ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸಿ, ದ್ವೇಷಾಸೂಯೆ ಬಿತ್ತುವ ಯೋಜನೆ ರೂಪಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪಾಟ್ನಾದ ಮಧುಬನಿಯಲ್ಲಿ ಬಿಹಾರ ನಾಲ್ಕನೇ ಹಂತದ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೋದ ಕಡೆಯಲ್ಲೆಲ್ಲಾ ಮೋದಿ ಜನತೆಯ ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ಬಿಹಾರದಲ್ಲಿ ಮೈತ್ರಿ ಪಕ್ಷಗಳ ಬಗ್ಗೆ ಮೋದಿ ಅತ್ಯಂತ ಕೆಟ್ಟ ರೀತಿಯಲ್ಲಿ ಟೀಕಿಸುತ್ತಿದ್ದಾರೆ ಎಂದು ದೂರಿದರು.
ಇನ್ನು ಸಮುದಾಯಗಳನ್ನು ಒಡೆದು ಆಳುವುದು ಬಿಜೆಪಿಯ ಪ್ರಮುಖ ಅಜೆಂಡವಾಗಿದೆ ಎಂದು ರಾಹುಲ್ ಆಪಾದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


