ರಾಷ್ಟ್ರೀಯ ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದ ಬಾಲಿವುಡ್ ನಟಿ
ದೇಶ ಗೌರವವಿಟ್ಟು ನೀಡಿರುವ ರಾಷ್ಟ್ರೀಯ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು...

Published On :
ಮುಂಬೈ: ದೇಶ ಗೌರವವಿಟ್ಟು ನೀಡಿರುವ ರಾಷ್ಟ್ರೀಯ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಹೇಳಿದ್ದಾರೆ.
ಸರ್ಕಾರ ನನಗೆ ಪ್ರಶಸ್ತಿಯನ್ನು ನೀಡಿಲ್ಲ. ದೇಶ ಗೌರವವಿಟ್ಟು ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದೆ. ಹಾಗಾಗಿ, ನಾನು ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣ ಖಂಡಿಸಿ ಚಿತ್ರರಂಗದ ಪ್ರಮುಖರು ತಮಗೆ ನೀಡಿರುವ ಪ್ರಶಸ್ತಿಯನ್ನು ವಾಪಸ್ ನೀಡಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ವಿದ್ಯಾಬಾಲನ್ ಅವರಿಗೆ ಪತ್ರಕರ್ತರು, ತಾವು ಕೂಡಾ ಪ್ರಶಸ್ತಿ ವಾಪಸ್ ಮಾಡುತ್ತೀರಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಯಿಸಿದ ಅವರು, ದೇಶ ನನ್ನನ್ನು ಸನ್ಮಾನಿಸಿರುವುದು. ಸರ್ಕಾರವಲ್ಲ. ಹೀಗಾಗಿ ಪ್ರಶಸ್ತಿಯನ್ನು ನಾನು ವಾಪಸ್ ಮಾಡುವುದಿಲ್ಲ ಎಂದಿದ್ದಾರೆ.
2012ರಲ್ಲಿ ಡರ್ಟಿ ಪಿಕ್ಚರ್ ಸಿನಿಮಾ ನಟನೆಗಾಗಿ ವಿದ್ಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


