ತಮಿಳು ಹಾಸ್ಯ ನಟ ವಿವೇಕ್ ಪುತ್ರ ನಿಧನ
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತಮಿಳುನಾಡಿನ ಖ್ಯಾತ ಹಾಸ್ಯ ನಟ ವಿವೇಕ್ ಪುತ್ರ ಪ್ರಸನ್ನ ಕುಮಾರ್ (13) ನಿಧನರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ...

ತಮಿಳುನಾಡು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತಮಿಳುನಾಡಿನ ಖ್ಯಾತ ಹಾಸ್ಯ ನಟ ವಿವೇಕ್ ಪುತ್ರ ಪ್ರಸನ್ನ ಕುಮಾರ್ (13) ನಿಧನರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಪ್ರಸನ್ನ ಕುಮಾರ್ (13) ಹಲವು ದಿನಗಳಿಂದಲೂ ತೀವ್ರ ಜ್ವರದಿಂದ ಬಳಲುತ್ತಿದ್ದ. 40 ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾನೆಂದು ನಟ ವಿವೇಕ್ ತಿಳಿಸಿದ್ದಾರೆ.
13 ವರ್ಷ ಹರೆಯದ ಪ್ರಸನ್ನ ಕುಮಾರ್ ತಂದೆ ವಿವೇಕ್, ತಾಯಿ ಅರುಸೆಲ್ವಿ ಹಾಗೂ ಸಹೋದರಿಯರಾದ ಅಮೃತಾ ನಂದಿನಿ ಮತ್ತು ತೇಜಸ್ವಿನಿಯರನ್ನು ಅಗಲಿದ್ದಾರೆ.
ವಿವೇಕ್ ಪುತ್ರನ ಅಗಲಿಕೆಗೆ ಇಡೀ ತಮಿಳುನಾಡು ಚಿತ್ರರಂಗ ಕಂಬನಿ ಮಿಡಿದಿದ್ದು, ಸಾಮಾಜಿಕ ಜಾಲತಾಣದಾದ್ಯಂತ ಸಾಕಷ್ಟು ಸಂತಾಪಗಳು ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


