ಚೀನಾ-ಪಾಕ್'ಗೆ ಮೋದಿ ಎಂದರೆ ಭಯ, ಮೋದಿಗೇ ಮತ ನೀಡಿ: ಬಿಜೆಪಿ ನಾಯಕ
ಚೀನಾ ಮತ್ತು ಪಾಕಿಸ್ತಾನ ದೇಶಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೆಂದರೆ ಭಯವಿದ್ದು, ಬಲ ಹೆಚ್ಚಿಸಲು ಮೋದಿಯವರಿಗೆ ಮತ ಹಾಕಬೇಕಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ಶುಕ್ರವಾರ ಹೇಳಿದ್ದಾರೆ...

ಪಾಟ್ನ: ಚೀನಾ ಮತ್ತು ಪಾಕಿಸ್ತಾನ ದೇಶಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೆಂದರೆ ಭಯವಿದ್ದು, ಬಲ ಹೆಚ್ಚಿಸಲು ಮೋದಿಯವರಿಗೆ ಮತ ಹಾಕಬೇಕಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಚೀನಾ ಮತ್ತು ಪಾಕಿಸ್ತಾನ ದೇಶಗಳು ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆದರುತ್ತಿದ್ದು, ಬಿಹಾರ ಜನತೆ ಮೋದಿಯವರನ್ನು ದುರ್ಬಲರನ್ನಾಗಿ ಮಾಡದೆ, ಮತ್ತಷ್ಟು ಬಲ ನೀಡಲು ಮತ ಹಾಕಬೇಕಿದೆ ಹೇಳಿದ್ದಾರೆ.
ಇದರಂತೆ ಟ್ವಿಟರ್ ನಲ್ಲಿಯೂ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಬಿಹಾರದಲ್ಲಿ ಬಿಜೆಪಿ ಗೆಲವು ಸಾಧಿಸಿದ್ದೇ ಆದರೆ ಭಾರತದಲ್ಲಿ ದೀಪಾವಳಿ ಹಬ್ಬವಾಗುತ್ತದೆ. ಮತ್ತು ಯುಪಿಎ ಸರ್ಕಾರ ಗೆದ್ದರೆ ಪಾಕಿಸ್ತಾನದಲ್ಲಿ ಹಬ್ಬ ಆಚರಣೆಯಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


