ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ: ತಮಿಳು ಜಾನಪದ ಗಾಯಕ ಅರೆಸ್ಟ್
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುಚ್ಚಿಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಮಾರುತಂಡ ಕುರುಚಿ ಎಂಬ ಗ್ರಾಮದಲ್ಲಿ ವಾಸವಿದ್ದ ಜಾಮಪದ ಗಾಯಕ ಶಿವದಾಸ್ ಅಲಿಯಾಸ್ ಕೊವಾನ್ ಅವರನ್ನ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಬಂಧಿಸಿ, ವಿಚಾರಣೆಗಾಗಿ ಚೆನ್ನೈಗೆ ಕರೆತರಲಾಗಿದೆ.
ಗಾಯಕ ಕೋವನ್ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ರಾಜ್ಯಾದ್ಯಂತ ಅನೇಕ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಜ್ಜಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾರಾಯಿ ಅಂಗಡಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಜಯಲಲಿತಾ ವಿರುದ್ಧ ಅವಹೇಳಕಾರಿ ಸಾಹಿತ್ಯ ಬರೆದು ಆನ್ ಲೈನ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


