'ನರಭಕ್ಷಕ' ಅಮಿತ್ ಶಾ ಕಡೆಗೂ ಹುಚ್ಚನಾಗಿದ್ದಾರೆ: ಲಾಲು
ಬಿಹಾರದಲ್ಲಿ ಬಿಜೆಪಿ ಸೋತರೆ, ಪಾಕಿಸ್ತಾನದಲ್ಲಿ ಪಟಾಕಿ ಹೊಡೆಯುತ್ತಾರೆ ಎಂದಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ತೀವ್ರ ವಾಗ್ದಾಳಿ ನಡೆಸಿರುವ...

ಪಾಟ್ನಾ: ಬಿಹಾರದಲ್ಲಿ ಬಿಜೆಪಿ ಸೋತರೆ, ಪಾಕಿಸ್ತಾನದಲ್ಲಿ ಪಟಾಕಿ ಹೊಡೆಯುತ್ತಾರೆ ಎಂದಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, 'ನರಭಕ್ಷಕ' (ಶಾ) ಕಡೆಗೂ ಹುಚ್ಚನಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ಶಾ ಹೇಳಿಕೆಗೆ ತಿರುಗೇಟು ನೀಡಿದ ಲಾಲು, ಬಿಜೆಪಿ ಸೋತರೆ,ಪಾಕಿಸ್ತಾನದಲ್ಲಿ ಪಟಾಕಿ ಹೊಡೆಯುತ್ತಾರೆ ಎಂದು ಹೇಳುವ ಮೂಲಕ ಅವರು ಬಿಹಾರ ಜನತೆಗೆ ಅವಮಾನ ಮಾಡಿದ್ದಾರೆ. ಅವರು ಈಗ ಸಂಪೂರ್ಣ ಮಾನಸಿಕ ಸ್ಥಿಮಿತ ಕಳೆದುಕೊಂಡು ಹುಚ್ಚನಂತಾಗಿದ್ದಾರೆ, ಏನೇ ಮಾಡಿದರೂ ಬಿಜೆಪಿಯ ಸೋಲು ಖಚಿತ ಎಂದು ಲಾಲು ಹೇಳಿದರು.
ಇಂಥಹ ಹೇಳಿಕೆ ನೀಡಿದ ಅಮಿತ್ ಶಾ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಲಾಲು ಎಚ್ಚರಿಸಿದರು.
ನಿನ್ನೆ ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ರ್ಯಾಲಿ ವೇಳೆ 'ಒಂದು ವೇಳೆ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಸೋತರೆ, ಪಾಕಿಸ್ತಾನದಲ್ಲಿ ಪಟಾಕಿ ಸಿಡಿಯುತ್ತದೆ. ಪಾಕ್ ನಲ್ಲಿ ದೀಪಾವಳಿ ಆಚರಣೆಯಾಗುವುದನ್ನು ನೀವು ಬಯಸುತ್ತೀರಾ?' ಎಂದು ಮತದಾರರನ್ನು ಅಮಿತ್ ಶಾ ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


