ಅಖಿಲೇಶ್ ಯಾದವ್ ಸಂಪುಟಕ್ಕೆ 11 ನೂತನ ಸಚಿವರು
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ತಮ್ಮ ಸಚಿವ ಸಂಪುಟವನ್ನು ಪುನರ್ರಚಿಸಿದ್ದು, 11 ನೂತನ ಸಚಿವರು ಸಂಪುಟಕ್ಕೆ...

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ತಮ್ಮ ಸಚಿವ ಸಂಪುಟವನ್ನು ಪುನರ್ರಚಿಸಿದ್ದು, 11 ನೂತನ ಸಚಿವರು ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. 9 ಸಚಿವರಿಗೆ ಬಡ್ತಿ ನೀಡಲಾಗಿದ್ದು, ಅವರಲ್ಲಿ ಕೆಲವರಿಗೆ ಸ್ವತಂತ್ರ ನಿರ್ವಹಣೆ ವಹಿಸಲಾಗಿದೆ.ಮೂವರು ರಾಜ್ಯ ಸಚಿವರಿಗೆ ಸಂಪುಟ ದರ್ಜೆ ಸಚಿವರಾಗಿ, ಎಂಟು ಮಂದಿ ಸ್ವತಂತ್ರ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೂಲಕ 20 ಮಂದಿ ಸಚಿವರು ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ರಾಮ್ ನಾಯ್ಕ್ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.
ಸರ್ಕಾರ ಮೊನ್ನೆ ಗುರುವಾರ 8 ಸಚಿವರನ್ನು ವಜಾಗೊಳಿಸಿತ್ತು. ಅವರಲ್ಲಿ ಐವರು ಸಂಪುಟ ದರ್ಜೆ ಮತ್ತು ಮೂವರು ರಾಜ್ಯ ಸಚಿವರಾಗಿದ್ದರು. ಇತರ ಒಂಭತ್ತು ಮಂದಿ ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗಿತ್ತು. ಸಚಿವ ಸ್ಥಾನ ಕಳೆದುಕೊಂಡವರಲ್ಲಿ ರಾಜಾ ಅರಿದಮನ್ ಸಿಂಗ್ ಮತ್ತು ಶಿವ ಕುಮಾರ್ ಬೆರಿಯಾ ಪ್ರಮುಖರು.
2017ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಪ್ರಾಮುಖ್ಯತೆ ಮತ್ತು ಜಾತಿಯನ್ನು ನೋಡಿಕೊಂಡು ಅಖಿಲೇಶ್ ಸಂಪುಟ ವಿಸ್ತರಣೆ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ವಿಶ್ಲೇಷಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


