ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡುವಲ್ಲಿ ಮಹಾರಾಷ್ಟ್ರ ಪ್ರಥಮ: ಫಡ್ನವೀಸ್
ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡುವ ಮೊದಲ ಐದು ರಾಜ್ಯಗಳಲ್ಲಿ ಮಹಾರಾಷ್ಟ್ರ ಸ್ಥಾನ ಪಡೆದುಕೊಂಡಿದೆ ಎಂದು...

ಮುಂಬಯಿ: ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡುವ ಮೊದಲ ಐದು ರಾಜ್ಯಗಳಲ್ಲಿ ಮಹಾರಾಷ್ಟ್ರ ಸ್ಥಾನ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು ಮುಂದಿನ ವರ್ಷ ಮಹಾರಾಷ್ಟ್ರ ಸರಕಾರವು ಈ ವಿಷಯದಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆಯಲಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರಕಾರದ ಆಡಳಿತಾವಧಿಯಲ್ಲಿ ಮಹಾರಾಷ್ಟ್ರವು ಈ ಪಟ್ಟಿಯಲ್ಲಿ ಕೊನೆಯ ಎರಡು ಮೂರು ಸ್ಥಾನದಲ್ಲಿತ್ತು. ಕಳೆದ ಆರು ತಿಂಗಳಲ್ಲಿ ಮಹಾರಾಷ್ಟ್ರದಲ್ಲಿನ ಎಲ್ಲ ಪೊಲೀಸ್ ಠಾಣೆಗಳು ಆನ್‌ಲೈನ್ ಸಂಪರ್ಕ ಹೊಂದಿದ್ದು, ಆನ್ ಲೈನ್ ನಲ್ಲೇ ಎಫ್ ಐ ಆರ್ ದಾಖಲಿಸಲಾಗುತ್ತಿದೆ ಎಂದರು.
ಮುಂಬಯಿ ನಗರದಲ್ಲಿ 6,000 ಸಿಸಿ ಟಿವಿಗಳನ್ನು ಅಳವಡಿಸುವ ಗುರಿ ಹೊಂದಲಾಗಿದ್ದು ಈಗಾಗಲೇ 1,200 ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


