ದೇಶ

ಬಿಹಾರ ವಿಧಾನಸಭಾ ಚುನಾವಣೆ: 4ನೇ ಹಂತದ ಮತದಾನ ಆರಂಭ

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಭಾನುವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ...

ಬಿಹಾರ ವಿಧಾನಸಭಾ ಚುನಾವಣೆ: 4ನೇ ಹಂತದ ಮತದಾನ ಆರಂಭ
ಬಿಹಾರ ವಿಧಾನಸಭಾ ಚುನಾವಣೆ: 4ನೇ ಹಂತದ ಮತದಾನ ಆರಂಭ
Published On :

ಪಾಟ್ನ: ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಭಾನುವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ನಾಲ್ಕನೇ ಹಂತದ ಈ ಚುನಾವಣೆಯು ಇಂದು ಬೆಳಿಗ್ಗೆ  7 ರಿಂದ 5 ಗಂಟೆಯವರೆಗೂ ನಡೆಯಲಿದ್ದು, ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಈಗಾಗಲೇ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದು ನಡೆಯುತ್ತಿರುವ ಮತದಾನ ಪ್ರಕ್ರಿಯೆಯು 55 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು ಚುನಾವಣೆಗಾಗಿ 14, 139 ಮತಗಟ್ಟೆ ಸ್ಥಾಪಿಸಲಾಗಿದೆ. ಸುಮಾರು 1. 46 93, 294 ಕೋಟಿ ಮತದಾರರು ಭಾಗವಹಿಸಲಿದ್ದಾರೆ. ಚುನಾವಣೆಯಲ್ಲಿ 57 ಮಹಿಳಾ ಅಭ್ಯರ್ಥಿಗಳು ಸೇರಿದಂದೆ ಒಟ್ಟು  776 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಮತದಾನ ಪ್ರಕ್ರಿಯೆಗೆ ಯಾವುದೇ ತೊಡಕಾಗದಂತೆ ಎಚ್ಚರಿಕೆ ವಹಿಸಿರುವ ಚುನಾವಣಾ ಆಯೋಗವು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಿದೆ

ಇನ್ನುಳಿದಂತೆ 1 ಸುತ್ತಿನ ಮತದಾನವು ನವೆಂಬರ್‌ 5ರಂದು ನಡೆಯಲಿದ್ದು, ಚುನಾವಣೆಯ ಫಲಿತಾಂಶವು ನ. 8ರಂದು ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.