ದೇಶ

ತಿಹಾರ್ ಜೈಲು ಆಸ್ಪತ್ರೆಯ 26 ಮಹಿಳಾ ನರ್ಸ್ ಗಳನ್ನು ವರ್ಗಾಯಿಸಿದ ದೆಹಲಿ ಸರ್ಕಾರ

ಮಹಿಳಾ ವೈದ್ಯೆಯೊಬ್ಬರು ಜೈಲಿನ ಕೈದಿ ಮೇಲೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿದಂತೆ ಭದ್ರತೆ ಕಾರಣಕ್ಕಾಗಿ ದೆಹಲಿ...

ತಿಹಾರ್ ಜೈಲು ಆಸ್ಪತ್ರೆಯ 26 ಮಹಿಳಾ ನರ್ಸ್ ಗಳನ್ನು ವರ್ಗಾಯಿಸಿದ ದೆಹಲಿ ಸರ್ಕಾರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮಹಿಳಾ ವೈದ್ಯೆಯೊಬ್ಬರು ಜೈಲಿನ ಕೈದಿ ಮೇಲೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿದಂತೆ ಭದ್ರತೆ ಕಾರಣಕ್ಕಾಗಿ ದೆಹಲಿ ಸರ್ಕಾರ ತಿಹಾರ ಜೈಲು ಆಸ್ಪತ್ರೆಯ 26 ಮಹಿಳಾ ನರ್ಸ್ ಗಳನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದ್ದು, ಮಹಿಳಾ ನರ್ಸ್ ಗಳಿಗೆ ಬದಲಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯ ಪುರುಷ ನರ್ಸ್ ಗಳನ್ನು ತಿಹಾರ್ ಜೈಲು ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಆದರೆ ಸರ್ಕಾರದ ಈ ವರ್ಗಾವಣೆ ಕ್ರಮ ತಿಹಾರ್ ನ ಮಹಿಳಾ ನರ್ಸ್ ಗಳಿಗೆ ಅಸಮಾಧಾನವನ್ನುಂಟುಮಾಡಿದೆ. ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡದಾದ ಕಾರಾಗೃಹಗಳಲ್ಲಿ ಒಂದಾದ ತಿಹಾರ್ ನಲ್ಲಿ ಸಿಬ್ಬಂದಿಗಳಿಗೆ ಭದ್ರತೆ ಮತ್ತು ರಕ್ಷಣೆ ಇಲ್ಲದಿದ್ದರೆ ರಾಜಧಾನಿಯ ಉಳಿದ ಕಡೆ ಭದ್ರತೆ ಎಲ್ಲಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
 ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು, ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಯೊಬ್ಬರೂ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿರುವಾಗ, ವ್ಯವಸ್ಥೆಯೊಳಗೆ ಲೋಪದೋಷಗಳು, ಸಮಸ್ಯೆಗಳು ಕಂಡುಬಂದಲ್ಲಿ ಅದರ ವಿರುದ್ಧ ಹೋರಾಡಿ ಗೆಲ್ಲಬೇಕು. ಅದು ಬಿಟ್ಟು ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ವರ್ಗಾವಣೆ ಮಾಡುವುದು ಪರಿಹಾರವಲ್ಲ. ಇದು ಮಹಿಳೆಯರಲ್ಲಿ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಮಹಿಳಾ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕಾದುದು ಸರ್ಕಾರದ ಕರ್ತವ್ಯ ಎಂದು ಪತ್ರದಲ್ಲಿ ಮಹಿಳಾ ದಾದಿಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.