ನಂದಿಗ್ರಾಮದ ಬಿಜೆಪಿ ಸಭೆಯ ಮೇಲೆ ದಾಳಿ; ಇಬ್ಬರಿಗೆ ಗಾಯ, ಕಾಣೆಯಾದ ನಾಲ್ವರು
ನಂದಿಗ್ರಾಮದ ಪೂರ್ವ ಮಿದ್ನಾಪೋರ್ ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಸಭೆಯ ಮೇಲೆ ಆಡಳಿತ ತೃಣಮೂಲ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು

ನಂದಿಗ್ರಾಮ: ನಂದಿಗ್ರಾಮದ ಪೂರ್ವ ಮಿದ್ನಾಪೋರ್ ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಸಭೆಯ ಮೇಲೆ ಆಡಳಿತ ತೃಣಮೂಲ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಈ ಗಲಭೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ನಾಲ್ವರು ಕಾಣೆಯಾಗಿದ್ದಾರೆ.
ನೆನ್ನೆ ನಡೆದ ಈ ದಾಳಿಯಲ್ಲಿ ನಮ್ಮ ಪಕ್ಷದ ಪಾತ್ರವಿಲ್ಲ ಎಂದು ಟಿಎಂಸಿ ಪಕ್ಷದ ಪ್ರಾದೇಶಿಕ ಮುಖಂಡರು ಹೇಳಿದ್ದಾರೆ. ನಾವು ನಂದಿಗ್ರಾಮದ ಟೆಕಾಲಿ ಬಜಾರಿ ನಲ್ಲಿ ಸಭೆ ನಡೆಸುವಾಗ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಮೇಲೆ ದಾಳಿ ಮಾಡಿದರು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಕುಮಾರ್ ದಾಸ್ ಆರೋಪಿಸಿದ್ದಾರೆ.
ಈ ದಾಳಿಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಅವರನ್ನು ನಂದಿಗ್ರಾಮದ ಆಸ್ಪತ್ರೆಗೆ ಸೇರಿಸುವುದಾಗಿ ಹೇಳಿರುವ ದಾಸ್ ನಾಲ್ಕು ಜನ ಕಾಣೆಯಾಗಿದ್ದಾರೆ ಎಂದು ಕೂಡ ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಟಿಎಂಸಿ ಪಕ್ಷದ ವಿರುದ್ಧ ನಂದಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲ ಪೊಲೀಸ್ ಅಧೀಕ್ಷಕ ಅಲೋಕ್ ರಜೋರಿಯಾ, ಘಟನೆ ಬಗ್ಗೆ ತಿಳಿದಿದ್ದು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


