ಪಾಕ್‌ನಲ್ಲಿ 'ನಕಲಿ' ಟೈಗರ್ ಮೆಮನ್ ಬಂಧನ
ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್‌ಮೈಂಡ್ ಟೈಗರ್ ಮೆಮನ್‌ನ್ನು ಬುಧವಾರ ಪಾಕಿಸ್ತಾನದ ಕರಾಚಿಯಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ...

ನವದೆಹಲಿ: ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್‌ಮೈಂಡ್ ಟೈಗರ್ ಮೆಮನ್‌ನ್ನು ಬುಧವಾರ ಪಾಕಿಸ್ತಾನದ ಕರಾಚಿಯಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಕೇಳಿದೊಡನೆ ಎಲ್ಲರೂ ಒಂದು ಕ್ಷಣ ಹೌದಾ? ಎಂದು ಉದ್ಗರಿಸಿದ್ದು ನಿಜ.
ಆದರೆ ಬಂಧಿತನಾದದ್ದು ಉಗ್ರ ಟೈಗರ್ ಮೆಮನ್ ಅಲ್ಲ, ನಕಲಿ ಟೈಗರ್ ಮೆಮನ್. ಪಾಕಿಸ್ತಾನದಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಂಧಿತನಾದ ಆ ವ್ಯಕ್ತಿಯ ಹೆಸರು ಫರ್ಕಾನ್.
ಭೂಗತ ದೊರೆ ಟೈಗರ್ ಮೆಮನ್ ಹೆಸರಿನಲ್ಲಿ ಈತ ಹೆಣ್ಮಕ್ಕಳನ್ನು ಚುಡಾಯಿಸುತ್ತಿದ್ದ, ಜನರನ್ನು ಬೆದರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಇದೀಗ ಪೊಲೀಸರ ಅತಿಥಿಯಾಗಿರುವ ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.
1993ರ ಮುಂಬೈ ಸರಣಿ ಸ್ಫೋಟದಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಟೈಗರ್ ಮೆಮನ್ ದುಬೈನಲ್ಲಿ ತಲೆ ಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆತನಿಗಾಗಿ ಇಂಟರ್‌ಪೋಲ್ ಮತ್ತು ಸಿಬಿಐ ಹಲವಾರು ವರ್ಷಗಳಿಂದ ಹುಡುಕಾಟ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


