ಸಹಪಾಠಿಯೊಂದಿಗೆ ಗುದ್ದಾಡಿ ಸಾವನ್ನಪ್ಪಿದ ಹೈದರಾಬಾದ್ ಶಾಲಾ ವಿದ್ಯಾರ್ಥಿ
೧೦ನೆ ತರಗತಿಯ ಖಾಸಗಿ ಶಾಲೆಯ ವಿಯಾರ್ಥಿಯೊಬ್ಬ ತನ್ನ ಸಹಪಾಠಿಯೊಂದಿಗೆ ಗುದ್ದಾಡಿ ಮೃತಪಟ್ಟ ಘಟನೆ ಹೈದರಾಬಾದಿನಲ್ಲಿ ನಡೆದಿದೆ ಎಂದು

ಹೈದರಾಬಾದ್: ೧೦ನೆ ತರಗತಿಯ ಖಾಸಗಿ ಶಾಲೆಯ ವಿಯಾರ್ಥಿಯೊಬ್ಬ ತನ್ನ ಸಹಪಾಠಿಯೊಂದಿಗೆ ಗುದ್ದಾಡಿ ಮೃತಪಟ್ಟ ಘಟನೆ ಹೈದರಾಬಾದಿನಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸೇಂಟ್ ಜೋಸೆಫ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅಮೀರ್ ಸಿದ್ದಿಕಿ ಗೆ ಮೆದುಳಿನಲ್ಲಿ ರಕ್ತಸ್ರಾವವಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನದ ಊಟದ ಸಮಯದಲ್ಲಿ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟ ನಂತರವಷ್ಟೇ ಪೊಲೀಸರಿಗೆ ವಿಷಯ ತಿಳಿದಿದೆ.
ಮಸಬ್ ಟ್ಯಾಂಕ್ ನಿವಾಸಿಗಳಾದ ಸಿದ್ದಿಕಿ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸಿದ್ದಿಕಿ ಮತ್ತು ಇನ್ನೊಬ್ಬ ವಿದ್ಯಾರ್ಥಿ ಶರಿಯಾಲ್ ಶಾಲಾ ಮೈದಾನದಲ್ಲಿ ಕಾದಾಟಕ್ಕೆ ಇಳಿದಿದ್ದಾರೆ. ಶರಿಯಾಲ್, ಸಿದ್ದಿಕಿ ತಲೆಗೆ ಹೊಡೆದಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ಕಮಲಾಸನ್ ರೆಡ್ಡಿ ಹೇಳಿದ್ದಾರೆ.
ಶಾಲೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಸಿದ್ದಿಕಿಯನ್ನು ಕಾಮಿನೇನಿ ಆಸ್ಪತ್ರೆಕೆ ದಾಖಲು ಮಾಡಲಾಗಿದೆ. ಮಂಗಳವಾರ ರಾತ್ರಿ ಮೆದುಳು ಶಸ್ತ್ರಚಿಕಿತ್ಸೆಯನ್ನು ವೈದ್ಯರು ನಡೆಸಿದ್ದರು, ಬಾಲಕ ಗುಣಮುಖನಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಈ ಘಟನೆಯಿಂದ ಅಘಾತಗೊಂಡಿರುವ ಸಿದ್ದಿಕಿ ಪೋಷಕರು, ತಮ್ಮ ಮಗನ ಸಾವಿಗೆ ಕಾರಣನಾದ ವಿದ್ಯಾರ್ಥಿಯ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಶಾಲಾ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ವಿಡಿಯೋಗಳನ್ನು ಪರಿಶೀಲಿಸುತ್ತಿದ್ದು ತನಿಖೆ ಪ್ರಾರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


