ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ
ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ನಿನ್ನೆ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಅವರು, ಹಗರಣ ನಡೆದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ಸಚಿವರಾಗಿದ್ದರು. ಜಾರ್ಖಂಡಿನಲ್ಲಿ ಅಮರ ಖಂಡ ಮುರ್ಗಂದಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಹಗರಣ ನಡೆದಿರುವುದೇ ಸತ್ಯವಾದರೆ, ಈ ಹಗರಣ ಮನಮೋಹನ್ ಸಿಂಗ್ ಅವರಿಗೆ ತಿಳಿಯದೇ ನಡೆದಿರುವುದಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಮನಮೋಹನ್ ಸಿಂಗ್ ಅವರನ್ನು ವಿಚಾರಣಗೊಳಪಡಿಸಬೇಕೆಂದು ಹೇಳಿಕೊಂಡಿದ್ದಾರೆ.
ಅಂದು ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಹಗರಣ ಬಗ್ಗೆ ಎಲ್ಲಾ ಮಾಹಿತಿ ತಿಳಿದಿದ್ದು, ಸಿಬಿಐ ಹೇಳಿರುವಂತೆ ಅಕ್ರ ನಡೆದಿದ್ದೇ ಆದರೆ, ಅದು ಕಲ್ಲಿದ್ದಲು ಸಚಿವರ ಅರಿವಿಗೆ ಬರದೆ ಸಂಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಮಧುಕೋಡಾ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ.
ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ, ಉದ್ಯಮಿ ನವೀನ್ ಜಿಂದಾಲ್ ಹಾಗೂ ಇತರೆ 13 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


