ಪ್ರತಿಭಾವಂತರು ರಾಜಕೀಯ ಪ್ರವೇಶಿಸಬೇಕು: ಪ್ರಧಾನಿ ನರೇಂದ್ರ ಮೋದಿ
ರಾಜಕೀಯ ಕ್ಷೇತ್ರ ಕೆಟ್ಟ ಹೆಸರು ಪಡೆಯುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಭಾವಂತರು ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ.

ನವದೆಹಲಿ: ರಾಜಕೀಯ ಕ್ಷೇತ್ರ ಕೆಟ್ಟ ಹೆಸರು ಪಡೆಯುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಕಾರಾತ್ಮಕ ಚಿಂತನೆಯುಳ್ಳ ಪ್ರತಿಭಾವಂತರು ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ.
ಶಿಕ್ಷಕರ ದಿನಾಚರಣೆ ಮುನ್ನಾದಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜಕೀಯ ಕ್ಷೇತ್ರ ಕೆಟ್ಟ ಹೆಸರುಪಡೆದುಕೊಳ್ಳುತ್ತಿದೆ. ರಾಜಕೀಯವೆಂದರೆ ಜನರು ಭಯಪಡುವ ವಾತಾವರಣ ನಿರ್ಮಾಣವಾಗಿದೆ, ಒಳ್ಳೆಯ ಜನರು ರಾಜಕೀಯಕ್ಕೆ ಬರಬಾರದೆಂಬ ಮನಸ್ಥಿತಿ ಇದ್ದು ಇದರಿಂದ ನಷ್ಟವುಂಟಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳು ಪ್ರಮುಖ ಭಾಗವಾಗಿದ್ದು ಉತ್ತಮ ಪ್ರತಿಭೆಗಳು ರಾಜಕೀಯಕ್ಕೆ ಬರುವುದು ಅವಶ್ಯವಾಗಿದೆ. ಉತ್ತಮ ಜನರು ರಾಜಕೀಯ ಪ್ರವೆಶಿಸಿದಷ್ಟೂ ದೇಶಕ್ಕೆ ಒಳಿತಾಗಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಪ್ರತಿಭಾವಂತರು ಒಂದು ವಾರದಲ್ಲಿ ಒಂದು ಗಂಟೆ ಪಾಠ ಮಾಡುವುದರಿಂದ ಶಿಕ್ಷಣ ಕ್ಷೇತ್ರ ಮತ್ತಷ್ಟು ಬಲಶಾಲಿಯಾಗಲಿದೆ. ಆದರೆ ರಾಜಕಾರಣಿಗಳು ಕೇವಲ ಉಪದೇಶ ನೀಡುವುದರಿಂದ ಅವರು ಈ ಕೆಲಸ ಮಾಡಬೇಕಿಲ್ಲ ಎಂದು ಮೋದಿ ಲಘುಧಾಟಿಯಲ್ಲಿ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


