ಯಾಕೂಬ್ ಮೆಮನ್, ಅಫ್ಜಲ್ ಗುರುಗೆ ಗಲ್ಲು, ರಾಜಕೀಯ ಪ್ರೇರಿತ: ನ್ಯಾ.ಶಾಹ್
ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ರಾಜಕೀಯ ಪ್ರೇರಿತ ಎಂದು ದೆಹಲಿ...

ನವದೆಹಲಿ: ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ರಾಜಕೀಯ ಪ್ರೇರಿತ ಎಂದು ದೆಹಲಿ ಹೈಕೋರ್ಟ್ ನಿವೃತ್ತ ಮುಖ್ಯ ನಾಯಮೂರ್ತಿ ಎ.ಪಿ.ಶಾಹ್ ಅವರು ಹೇಳಿದ್ದಾರೆ.
ಸಿಎನ್‌ಎನ್-ಐಬಿಎನ್ ಸುದ್ದಿವಾಹಿನಿಗೆ ಮಾತನಾಡಿರುವ ಕಾನೂನು ಆಯೋಗದ ಮಾಜಿ ಅಧ್ಯಕ್ಷ, ಅಫ್ಜಲ್ ಗಲ್ಲು ಶಿಕ್ಷೆ ನಿರಾಶೆ ಮೂಡಿಸಿತ್ತು ಎಂದಿದ್ದಾರೆ. ಅಲ್ಲದೆ ಮೆಮನ್ ಕ್ಷಮಧಾನಕ್ಕೆ ಇನ್ನು ಅವಕಾಶ ಇತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೆಮನ್‌ಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಶಾಹ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಧ್ಯೆಯೇ ಭಿನ್ನಾಭಿಪ್ರಾಯ ಇತ್ತು. ಹೀಗಾಗಿ ಅದನ್ನು ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು ಮತ್ತು ಕ್ಷಮಧಾನ ಅರ್ಜಿ ತಿರಸ್ಕಾರಗೊಂಡ ನಂತರ 14 ದಿನಗಳ ಕಾಲಾವಕಾಶ ನೀಡಬೇಕಿತ್ತು ಎಂದಿದ್ದಾರೆ.
ಈ ಎರಡೂ ಪ್ರಕರಣಗಳಲ್ಲಿ ಸರ್ಕಾರ ತುಂಬಾ ಆತುರದ ನಿರ್ಧಾರ ತೆಗೆದುಕೊಂಡಿದ್ದು, ಇದು ರಾಜಕೀಯ ಪ್ರೇರಿತ ಎಂದಿರುವ ಶಾಹ್, ಭಯೋತ್ಪಾದನಾ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಯನ್ನು ಒಂದು ನಿರೋಧಕವಾಗಿ ಬಳಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


