ದೇಶ

ಶೀನಾ ಕೊಲೆಗೆ ಬಳಸಿದ್ದ ಕಾರು ವಶಕ್ಕೆ ಪಡೆದ ಪೊಲೀಸರು

ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮುಂಬೈ ಪೊಲೀಸರು, ಶೀನಾ ಕೊಲೆಗೆ ಬಳಸಲಾಗಿದ್ದ ಕಾರನ್ನು ಶುಕ್ರವಾರ...

ಶೀನಾ ಕೊಲೆಗೆ ಬಳಸಿದ್ದ ಕಾರು ವಶಕ್ಕೆ ಪಡೆದ ಪೊಲೀಸರು
ಇಂದ್ರಾಣಿ- ಶೀನಾ ಬೋರಾ
Published On :

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮುಂಬೈ ಪೊಲೀಸರು, ಶೀನಾ ಕೊಲೆಗೆ ಬಳಸಲಾಗಿದ್ದ ಕಾರನ್ನು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆಯಷ್ಟೇ, ಇಂದ್ರಾಣಿ, ಪೀಟರ್ ಮುಖರ್ಜಿ ಮತ್ತು ಸಂಜೀವ್ ಖನ್ನಾ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇಂದ್ರಾಣಿಯ ಮತ್ತೊಬ್ಬಳು ಪುತ್ರಿಯಾದ ವಿಧಿಯನ್ನು ಖಾರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ಗುರುವಾರ ಮುಂಬೈ ಪೊಲೀಸರು ಇಂದ್ರಾಣಿ ಶೀನಾ ಬೋರಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆ ನೀಡಿದ್ದರು.

ಇನ್ನು, ಸ್ಟಾರ್‍ನ ಮಾಜಿ ಸಿಇಒ ಪೀಟರ್ ಮುಖರ್ಜಿ ಬ್ರಿಟನ್ ಮತ್ತು ಸ್ಪೇನ್‍ನಲ್ಲಿ ಹೊಂದಿರುವ ಉದ್ದಿಮೆಗಳು, ಅವುಗಳಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳ ವಿವರಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇದೇ ವೇಳೆ ಸತತ ಮೂರನೇ ದಿನವಾದ ಶುಕ್ರವಾರ ಕೂಡ ಮುಖರ್ಜಿ ವಿಚಾರಣೆ ನಡೆಯಿತು. ಜತೆಗೆ ಇಂದ್ರಾಣಿಯ ಮೊದಲ ಪತಿ ಹಾಗೂ ಶೀನಾ ತಂದೆ ಸಿದ್ಧಾರ್ಥ್ ದಾಸ್‍ರನ್ನು 2ನೇ ದಿನವೂ ವಿಚಾರಣೆ ನಡೆಸಿದ ಪೊಲೀಸರು ಅವರ ಡಿಎನ್‍ಎ ಪರೀಕ್ಷೆಗಾಗಿ ರಕ್ತದ ಮಾದರಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.