ಒಆರ್ ಒಪಿ ಸಂಪೂರ್ಣವಾಗಿ ಜಾರಿ ಮಾಡಲು ಎನ್.ಡಿ.ಎ ವಿಫಲ: ಕಪಿಲ್ ಸಿಬಲ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಸಮಾನ ಶ್ರೇಣಿ, ಸಮಾನ ಪಿಂಚಣಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಸಮಾನ ಶ್ರೇಣಿ, ಸಮಾನ ಪಿಂಚಣಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
ಸ್ವಯಂ ನಿವೃತ್ತಿ ಪಡೆದ ಸೈನಿಕರಿಗೆ ಒಆರ್ ಒಪಿಯನ್ನು ನೀಡದೇ ಎನ್ ಡಿ ಎ ಸರ್ಕಾರ ಯುಟರ್ನ್ ಹೊಡೆದಿದೆ. ಒಆರ್ ಒಪಿ ಜಾರಿಗೊಳಿಸಿರುವುದು ಮೂಲತಃ ಯುಪಿಎ ಸರ್ಕಾರದ ನಿರ್ಧಾರವಾಗಿತ್ತು. ಎಲ್ಲಾ ನಿವೃತ್ತ ಸೈನಿಕರಿಗೂ ಸಮಾನ ಶ್ರೇಣಿ, ಸಮಾನ ಪಿಂಚಣಿಯನ್ನು ನೀಡುವುದು ಯುಪಿಎ ಸರ್ಕಾರದ ಉದ್ದೇಶವಾಗಿತ್ತು. ಆದರೆ ಎನ್.ಡಿ.ಎ ಸರ್ಕಾರ ಸ್ವಯಂ ನಿವೃತ್ತಿ ಪಡೆದ ಸೈನಿಕರನ್ನು ಯೋಜನೆಯ ವ್ಯಾಪ್ತಿಯಿಂದ ಹೊರಗಿಟ್ಟಿದ್ದು ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರ ನಿವೃತ್ತ ಯೋಧರಿಗೆ ನಂಬಿಕೆ ದ್ರೋಹ ಮಾಡಿದೆ. ಸ್ವಯಂ ನಿವೃತ್ತಿ ಪಡೆಯುವ ಶೇ.46 ರಷ್ಟು ಸೈನಿಕರಿಗೆ ಒಆರ್ ಒಪಿ ಸಿಗುವುದಿಲ್ಲ, ಇದೆಂಥಾ ನ್ಯಾಯ ಎಂದು ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಇದರೊಂದಿಗೆ ಒಆರ್ ಒಪಿಯ ಕೆಲವು ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ರಚಿಸಲಾಗುವ ಸಮಿತಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ಮಧ್ಯಾಹ್ನ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ನಿವೃತ್ತ ಯೋಧರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಇಂದಿನಿಂದ ಒಆರ್ ಒಪಿ ಯೋಜನೆಯನ್ನು ಜಾರಿಗೊಳಿಸುತ್ತಿರುವುದಾಗಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


