ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಂತೆ ಶಿಕ್ಷಕರಿಗೆ ಪ್ರಧಾನಿ ಕರೆ
ಮಕ್ಕಳಿಗೆ ಸೃಜನಶೀಲರಾಗಲು ಸ್ಫೂರ್ತಿ ನೀಡುವುದಲ್ಲದೆ, ಬೋಧನೆಯ ಅಂಗವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅದನ್ನು ಸಕ್ರಿಯವಾಗಿ ಬಳಸುವಂತೆ

ನವದೆಹಲಿ: ಮಕ್ಕಳಿಗೆ ಸೃಜನಶೀಲರಾಗಲು ಸ್ಫೂರ್ತಿ ನೀಡುವುದಲ್ಲದೆ, ಬೋಧನೆಯ ಅಂಗವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಅದನ್ನು ಸಕ್ರಿಯವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರೆ ನೀಡಿದ್ದಾರೆ.
ಶಿಕ್ಷರ ದಿನಾಚರಣೆಯ ಅಂಗವಾಗಿ ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕರ ಜೊತೆಗೆ ಸಭೆ ನಡೆಸಿದ ಪ್ರಧಾನಿ, ದೇಶದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವತ್ತ ಶಿಕ್ಷಕರ ಸಮುದಾಯ ಸದಾ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
ಶಿಕ್ಷಕರು ತಂತ್ರಜ್ಞನಾವನ್ನು ಅಳವಡಿಸಿಕೊಂಡು ಅದನ್ನು ಬೋಧನೆಗೆ ಬಳಸಬೇಕು ಹಾಗು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಶಿಕ್ಷಕರಿಗೆ ಪ್ರಧಾನಿ ಕರೆ ನೀಡಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆಯೇ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಮನೋಭಾವ ಮೂಡಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಕೂಡ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಮ್ ಶಂಕರ್ ಕಥೇರಿಯಾ ಕೂಡ ಹಾಜರಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


