ದೇಶ

ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಏಕೆ? ಇಡಿಗೆ ಇಂಟರ್‌ಪೊಲ್ ಪ್ರಶ್ನೆ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಏಕೆ ಜಾರಿ ಮಾಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ(ಇಡಿ)ಕ್ಕೆ...

ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಏಕೆ? ಇಡಿಗೆ ಇಂಟರ್‌ಪೊಲ್ ಪ್ರಶ್ನೆ
ಲಲಿತ್ ಮೋದಿ
Published On :

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಏಕೆ ಜಾರಿ ಮಾಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ(ಇಡಿ)ಕ್ಕೆ ಇಂಟರ್‌ಪೊಲ್ ಪ್ರಶ್ಮಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಇಡಿ ಮನವಿ ಮಾಡಿತ್ತು. ಆದರೆ ರೆಡ್ ಕಾರ್ನರ್ ನೋಟಿಸ್ ಏಕೆ ಜಾರಿ ಮಾಡಬೇಕು ಎಂಬುದರ ಬಗ್ಗೆ ವಿವರಣೆ ನೀಡುವಂತೆ ಆಗಸ್ಟ್ 20ರಂದು ಇಡಿಗೆ ಇಂಟರ್‌ಪೊಲ್ ಕೇಳಿಕೊಂಡಿದೆ ಎಂದು ವರದಿ ಮಾಡಲಾಗಿದೆ. ಅಲ್ಲದೆ ಮೋದಿ ವಿರುದ್ಧ ಲಭ್ಯವಿರುವ ಸಾಕ್ಷಾಧಾರಗಳನ್ನು ಒದಗಿಸುವಂತೆ ಇಡಿಗೆ ಸೂಚಿಸಲಾಗಿದೆ.

ಲಲಿತ್‌ ಮೋದಿ ವಿರುದ್ಧ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್‌ ಹೊರಡಿಸಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ರೆಡ್‌ ಕಾರ್ನರ್‌ ನೊಟೀಸ್ ಜಾರಿ ಮಾಡಬೇಕೆಂದು ಜಾರಿ ನಿರ್ದೇಶನಲಾಯದ ಮುಂಬಯಿ ಘಟಕ ಸಿಬಿಐಗೆ ಮನವಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.