ಶೀನಾ ಕೊಲೆ ತನಿಖೆ ಯಥಾ ಪ್ರಕಾರ ಮುಂದುವರಿಯಲಿದೆ: ಅಹ್ಮದ್ ಜಾವೇದ್
ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎಲ್ಲಾ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂಬ...

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎಲ್ಲಾ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂಬ ವರದಿಯನ್ನು ಮುಂಬೈಯ ನೂತನ ಪೊಲೀಸ್ ಆಯುಕ್ತ ಅಹ್ಮದ್ ಜಾವೇದ್ ತಳ್ಳಿ ಹಾಕಿದ್ದಾರೆ.
ಮುಂಬೈ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ವರ್ಗವಾಗುವುದಿಲ್ಲ. ಶೀನಾ ಬೋರಾ ಕೊಲೆ ತನಿಖೆ ಮೊದಲಿನಂತೆಯೇ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಇಂದು ಬೆಳಗ್ಗೆ ಆದೇಶ ಹೊರಡಿಸಿದ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ರಾಕೇಶ್ ಮರಿಯಾ ಅವರಿಗೆ ಬಡ್ತಿ ನೀಡಿ ಗೃಹ ಕಾವಲು ಪಡೆಯ ಮಹಾ ನಿರ್ದೇಶಕರಾಗಿ ನೇಮಿಸಿದೆ.
ಶೀನಾ ಕೊಲೆ ಆರೋಪದಲ್ಲಿ ಇಂದ್ರಾಣಿ ಮುಖರ್ಜಿ ಮತ್ತು ಇತರ ಇಬ್ಬರು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಇನ್ನು ಕೆಲವು ವಾರಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುವುದರಲ್ಲಿದ್ದರು. ಆಗಲೇ ರಾಕೇಶ್ ಮರಿಯಾ ಅವರನ್ನು ವರ್ಗಾಯಿಸಿದ್ದು ರಾಜ್ಯದ ಇಲಾಖೆಯ ಅಧಿಕಾರಿಗಳಿಗೆ ಅಚ್ಚರಿಯನ್ನುಂಟುಮಾಡಿತ್ತು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಜಪಾನ್ ಗೆ ಪ್ರವಾಸಕ್ಕೆ ಹೊರಡುವ ಸ್ವಲ್ಪ ಹೊತ್ತಿಗೆ ಮುಂಚೆ ಆದೇಶ ಹೊರಬಿದ್ದಿದೆ.ರಾಕೇಶ್ ಮರಿಯಾ ಅವರ ವರ್ಗಾವಣೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಇದೊಂದು ಸಾಮಾನ್ಯ ವರ್ಗಾವಣೆ ಎಂದು ರಾಜ್ಯ ಗೃಹ ಕಾರ್ಯದರ್ಶಿ ಕೆ.ಪಿ.ಬಕ್ಷಿ ತಿಳಿಸಿದ್ದಾರೆ. ಆದರೆ ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಮಹಾರಾಷ್ಟ್ರ ಸರ್ಕಾರಕ್ಕೆ ಇಷ್ಟವಿರಲಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


