ದೇಶ

ಕಾಮುಕ ಹೆಡ್ ಮಾಸ್ಟರ್ ಗೆ ಚಪ್ಪಲಿ ಹಾರ ಹಾಕಿದ ಪೋಷಕರು

ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯನಿಗೆ ಪೋಷಕರು...

ಕಾಮುಕ ಹೆಡ್ ಮಾಸ್ಟರ್ ಗೆ ಚಪ್ಪಲಿ ಹಾರ ಹಾಕಿದ ಪೋಷಕರು
ಪೋಷಕರಿಂದ ಚಪ್ಪಲಿ ಹಾರ ಹಾಕಿಸಿಕೊಂಡ ರಬಿಶಂಕರ್- ಎಡ ತುದಿಯಲ್ಲಿ (ಸಂಗ್ರಹ ಚಿತ್ರ)
Published On :

ಬರ್ದ್ವಾನ್: ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯನಿಗೆ ಪೋಷಕರು ಚಪ್ಪಲಿ ಸೇವೆ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಪಶ್ಚಿಮ ಬಂಗಾಳದ ಬರ್ದ್ವಾನ್ ನ ಬಿಧನ್ ಪಾಲಿ ಪ್ರದೇಶದಲ್ಲಿರುವ ರಾಮಕೃಷ್ಣ ವಿದ್ಯಾಮಂದಿರ ಶಾಲೆಯಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪೋಷಕರು ಶಾಲೆಯ ಮುಖ್ಯೋಪಧ್ಯಾಯ ರಬಿಶಂಕರ್ ಮಾಝೀಗೆ ಹಿಗ್ಗಾಮಗ್ಗಾ ಥಳಿಸಿ, ಚಪ್ಪಲಿ ಹಾರ ಹಾಕಿದ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ರಬಿಶಂಕರ್ ಹಲವು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಈ ಸಂಬಂಧ ಅನೇಕ ಬಾರಿ ಆತನಿಗೆ ಎಚ್ಚರಿಕೆ ನೀಡಿದ್ದರೂ, ಆತ ತನ್ನ ಚಾಳಿಯನ್ನು ಮುಂದುವರಿಸಿದ್ದ. ಈ ಹಿನ್ನಲೆಯಲ್ಲಿ ಅವನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದು ಪೋಷಕರು ಹೇಳಿದ್ದಾರೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.