ದೇಶ

ಮರಿಯಾ ವರ್ಗಾವಣೆ ಶೀನಾ ಹತ್ಯೆ ಪ್ರಕರಣದ ತನಿಖೆ ಮೇಲೆ ಪರಿಣಾಮ: ಕಾಂಗ್ರೆಸ್

ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ಒಂದು ತಾರ್ಕಿಕ ಅಂತ್ಯಕ್ಕೆ ಬರುವವರೆಗೆ ಮಾಜಿ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರ ವರ್ಗಾವಣೆ...

ಮರಿಯಾ ವರ್ಗಾವಣೆ ಶೀನಾ ಹತ್ಯೆ ಪ್ರಕರಣದ ತನಿಖೆ ಮೇಲೆ ಪರಿಣಾಮ: ಕಾಂಗ್ರೆಸ್
ಶೀನಾ ಬೋರಾ - ಇಂದ್ರಾಣಿ ಮುಖರ್ಜಿ
Published On :

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ಒಂದು ತಾರ್ಕಿಕ ಅಂತ್ಯಕ್ಕೆ ಬರುವವರೆಗೆ ಮಾಜಿ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರ ವರ್ಗಾವಣೆ ಆದೇಶವನ್ನು ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಂ ಅವರು ಆಗ್ರಹಿಸಿದ್ದಾರೆ.

ಮರಿಯಾ ವರ್ಗಾವಣೆ ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆಯ ಮೇಲೆ ಪರಿಣಾಮ ಬೀರಲಿದೆ ಎಂದಿರುವ ನಿರುಪಂ, ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ತನಿಖೆಯನ್ನು ತಡೆಯಲು ಕಾರ್ಪೊರೇಟ್ ವಲಯ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೇರಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಸುಮಾರು 800 ಕೋಟಿ ರುಪಾಯಿ ಅವ್ಯವಹಾರದಲ್ಲಿ ಹಲವು ಕಾರ್ಪೊರೇಟ್ ಕಂಪನಿಗಳು ಭಾಗಿಯಾಗಿವೆ ಎಂದು ನಿರುಪಂ ಅವರು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ರಾಕೇಶ್ ಮರಿಯಾ ಅವರು ಈಗಾಗಲೇ ಸೆಪ್ಟೆಂಬರ್ 30ರೊಳಗೆ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಹೇಳಿದ್ದಾರೆ. ಪ್ರಕರಣ ತಾರ್ಕಿಕ ಅಂತ್ಯ ಕಾಣಬೇಕಾದರೆ ಮಹಾರಾಷ್ಟ್ರ ಸರ್ಕಾರ ಮರಿಯಾ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದಿದ್ದಾರೆ.

ಮರಿಯಾ ಅವರನ್ನು ಮಹಾರಾಷ್ಟ್ರ ಸರ್ಕಾರ ನಿನ್ನೆ ಗೃಹ ರಕ್ಷಕ ದಳದ ಡಿಜಿಯಾಗಿ ವರ್ಗಾವಣೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.