ಕಾರಿನಲ್ಲಿ ಉಸಿರುಗಟ್ಟಿ ಇಬ್ಬರು ಹೆಣ್ಣುಮಕ್ಕಳ ಸಾವು
ಕಾರಿನ ಒಳಗೆ ಆಟವಾಡಲು ಹೋದಾಗ ಕಾರಿನ ಬಾಗಿಲು ಲಾಕ್ ಆಗಿದ್ದರಿಂದ ಇಬ್ಬರು ಹೆಣ್ಣುಮಕ್ಕಳು ಉಸಿರುಗಟ್ಟಿ...

ಗುರ್ಗಾಂವ್: ಕಾರಿನ ಒಳಗೆ ಆಟವಾಡಲು ಹೋದಾಗ ಕಾರಿನ ಬಾಗಿಲು ಲಾಕ್ ಆಗಿದ್ದರಿಂದ ಇಬ್ಬರು ಹೆಣ್ಣುಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಹರಿಯಾಣದ ಗುರ್ಗಾಂವ್ ನಲ್ಲಿ ನಡೆದಿದೆ.
ಹಿಮಾಂಶಿ(4) ಮತ್ತು ಪಿಂಕಿ(2) ಮೃತಪಟ್ಟ ಮಕ್ಕಳು. ಹಿಮಾಂಶಿ ತನ್ನ ತಂಗಿ ಪಿಂಕಿಯೊಂದಿಗೆ ಆಟಕ್ಕಾಗಿ ಮನೆಯ ಮುಂದೆ ನಿಂತಿದ್ದ ಕಾರಿನಲ್ಲಿ ಹತ್ತಿದ್ದಾರೆ. ಹೈಡ್ ಅಂಡ್ ಸೀಕ್ ಆಟವಾಡುವ ಭರದಲ್ಲಿ ಕಾರಿನ ಬಾಗಿಲುಗಳು ಆಕಸ್ಮಾತ್ ಆಗಿ ಒಳಗಿನಿಂದ ಲಾಕ್ ಆದ ಕಾರಣ ಬಹಳ ಹೊತ್ತು ಇಬ್ಬರು ಕಾರಿನಲ್ಲಿ ಸಿಲುಕಿಕೊಂಡಿದ್ದಾರೆ.
ಬಹಳ ಹೊತ್ತಾದರೂ ಮನೆಯಲ್ಲಿ ಮಕ್ಕಳು ಕಾಣದಾದಾಗ ಅವರ ತಂದೆ ಹುಡುಕಾಟ ನಡೆಸಿದ್ದಾರೆ. ಆದರೆ ಮಕ್ಕಳು ಎಲ್ಲಿಯೂ ಕಾಣದ ಇದ್ದಾಗ ಪೊಲೀಸ್ ಠಾಣೆಯಲ್ಲಿ ದೂರು ನೀಡೋಣವೆಂದು ಕಾರ್ ಹತ್ತಲು ನೋಡಿದಾಗ ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ.
ಗಾಬರಿಗೊಂಡ ತಂದೆ ಕೂಡಲೇ ಅವರಿಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ ಅವರಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


