ಗಜೇಂದ್ರ ಚೌಹಾಣ್ ವಜಾಕ್ಕೆ ಆಗ್ರಹಿಸಿ ಎಫ್ ಟಿಐಐ ವಿದ್ಯಾರ್ಥಿಗಳಿಂದ ಆಮರಣಾಂತ ಉಪವಾಸ
ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಜೇಂದ್ರ ಸಿಂಗ್ ಚೌಹಾನ್ ನೇಮಕವನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.

ಪುಣೆ: ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಶಿಕ್ಷಣ ಸಂಸ್ಥೆ(ಎಫ್ ಟಿಐಐ)ಯ ಅಧ್ಯಕ್ಷ ಗಜೇಂದ್ರ ಚೌಹಾಣ್ ನೇಮಕವನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.
ಎಫ್.ಟಿ.ಐ.ಐ ನ ಮೂವರು ವಿದ್ಯಾರ್ಥಿಗಳು ಸೆ.10 ರಿಂದ ಆಮರಣಾಂತ ಉಪವಾಸ ಕೈಗೊಂಡಿದ್ದು ಗಜೇಂದ್ರ ಚೌಹಾಣ್ ಅವರನ್ನು ಎಫ್.ಟಿಐಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿದ್ದಾರೆ.
ಗಜೇಂದ್ರ ಚೌಹಾಣ್ ಅವರನ್ನು ವಜಾಗೊಳಿಸಲು ಆಗ್ರಹಿಸಿ ಎಫ್.ಟಿ.ಐ.ಐ ನ ವಿದ್ಯಾರ್ಥಿಗಳು 91 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳು ಆಮರಣಾಂತ ಉಪವಾಸ ಪ್ರಾರಂಭಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಜೂನ್ 12 ರಿಂದ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ.
ಗಜೇಂದ್ರ ಚೌಹಾಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವವರೆಗೂ ಆಮರಣಾಂತ ಉಪವಾಸ ಮುಂದುವರೆಸುತ್ತೇವೆ ಎಂದು ಹರಿಲಾಲ್, ಅಲೋಲ್ ಅರೋರಾ ಹಾಗೂ ಹಿಮಾಂಶು ಶೇಖರ್ ತಿಳಿಸಿದ್ದಾರೆ. ಪ್ರಸ್ತುತ ಆಮರಣಾಂತ ಉಪವಾಸ ಕೈಗೊಂಡಿರುವ ವಿದ್ಯಾರ್ಥಿಗಳ ಆರೋಗ್ಯ ಏರುಪೇರಾದರೆ, ಮತ್ತೊಂದು ತಂಡದ ವಿದ್ಯಾರ್ಥಿಗಳು ಉಪವಾಸ ಆರಂಭಿಸಲಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಫ್ ಟಿಐಐ ನಿರ್ದೇಶಕ ಪ್ರಶಾಂತ್ ಪಥ್ರಾಬೆ, ಆಮರಣಾಂತ ಉಪವಾಸದ ಬಗ್ಗೆ ಪೊಲೀಸರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದೆವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


