ಎಸ್.ಪಿ ಸದಸ್ಯೆ ಲೀಲಾವತಿ ಸುಂದರಿಯಲ್ಲ ಆದರೂ ಎಂಎಲ್ ಸಿ ಮಾಡಿದ್ದೇವೆ: ಮುಲಾಯಂ ಸಿಂಗ್
ವಿವಾದಗಳಿಂದಲೇ ಸುದ್ದಿಯಾಗುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ವಿವಾದಗಳಿಂದಲೇ ಸುದ್ದಿಯಾಗುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಮಾಜವಾದಿ ಪಕ್ಷದ ಮಹಿಳಾ ಘಟಕದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್, ತಮ್ಮದೇ ಪಕ್ಷದ ಮಹಿಳಾ ಕಾರ್ಯಕರ್ತರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಎಸ್.ಪಿ ವಿಧಾನಪರಿಷತ್ ಸದಸ್ಯೆ ಲೀಲಾವತಿ ಕುಶ್ವಾಹ ಸುಂದರವಾಗಿ ಇಲ್ಲ, ಆದರೂ ಅವರನ್ನು ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡಿದ್ದೇವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
"ಲೀಲಾವತಿ ಅವರು ಸುಂದರವಾಗಿಲ್ಲದಿದ್ದರೂ ಆಕೆ ಪಕ್ಷಕ್ಕಾಗಿ ಲಾಠಿ ಎದುರಿಸಿದ್ದಾರೆ, ಅವರ ಕೆಲಸಗಳನ್ನು ಹಾಗೂ ಕೊಡುಗೆಗಳನ್ನು ಪರಿಗಣಿಸಿ ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡಿದ್ದೇವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಮುಲಾಯಂ ಸಿಂಗ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಗ್ಯಾಂಗ್ ರೇಪ್ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಒಬ್ಬ ಅತ್ಯಾಚಾರ ಮಾಡಿದರೆ ಎಫ್ಐಆರ್ ನಲ್ಲಿ 4 ಜನರ ಹೆಸರಿರುತ್ತದೆ. ಆದರೆ ಗ್ಯಾಂಗ್ ರೇಪ್ ನಡೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದರು. 2012 ರ ಮಹಿಳಾ ಮೀಸಲಾತಿ ಮಸೂದೆ ಬಗ್ಗೆಯೂ ತಕರಾರು ತೆಗೆದಿದ್ದ ಮುಲಾಯಂ ಸಿಂಗ್, ಮಸೂದೆಯಿಂದ ಗ್ರಾಮೀಣ ಮಹಿಳೆಯರಿಗೆ ಪ್ರಯೋಜನವಾಗುವುದಿಲ್ಲ. ಏಕೆಂದರೆ ಗ್ರಾಮೀಣ ಮಹಿಳೆಯರು ಆಕರ್ಷಣೀಯವಾಗಿರುವುದಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


