ಡೆಂಗ್ಯೂಪೀಡಿತ ಬಾಲಕನಿಗೆ ಚಿಕಿತ್ಸೆ ನಿರಾಕರಣೆ: ಎರಡು ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್
ಶಂಕಿತ ಡೆಂಗ್ಯೂ ನಿಂದ ನರಳುತ್ತಿದ್ದ 7 ವರ್ಷದ ಬಾಲಕನಿಗೆ ದೆಹಲಿಯ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎರಡು ಖಾಸಗಿ ಆಸ್ಪತ್ರೆಗಳಿಗೆ ....

ನವದೆಹಲಿ: ಶಂಕಿತ ಡೆಂಗ್ಯೂ ನಿಂದ ನರಳುತ್ತಿದ್ದ 7 ವರ್ಷದ ಬಾಲಕನಿಗೆ ದೆಹಲಿಯ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎರಡು ಖಾಸಗಿ ಆಸ್ಪತ್ರೆಗಳಿಗೆ ದೆಹಲಿ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.
ಒಡಿಸ್ಸಾ ಮೂಲದ ದಂಪತಿಯ 7 ವರ್ಷದ ಪುತ್ರ ಅವಿನಾಶ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ದಂಪತಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ನಗರದ ಎರಡು ಆಸ್ಪತ್ರೆಗಳು ಬಾಲಕನಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರು. ಅಂದೇ ಅವಿನಾಶ್ ಮೃತ ಪಟ್ಟಿದ್ದನು. ಇದರಿಂದ ಮನನೊಂದ ಅವಿನಾಶ್ ಪೋಷಕರು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ತಿಳಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ಸೆಪ್ಟಂಬರ್ 14 ರಂದು ಪೂರ್ಣವಾದ ವರದಿ ನೀಡುವಂತೆ ಕೇಳಿದೆ. ಇನ್ನು ಡೆಂಗ್ಯೂ ಜ್ವರಕ್ಕೆ ನಿಯಮ ಉಲ್ಲಂಘಿಸಿ ಚಿಕಿತ್ಸೆ ನೀಡದ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಜರುಗಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


