ಬಿಹಾರ ಚುನಾವಣೆ: ಎಲ್ಲಾ ಮತಗಟ್ಟೆಗೂ ಅರೆಸೇನಾಪಡೆ ನಿಯೋಜನೆ; ಇಸಿ
ಇದೇ ಮೊದಲ ಬಾರಿಗೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 62,779 ಮತಗಟ್ಟೆಗಳಿಗೂ ಕೇಂದ್ರದ ಅರೆಸೇನಾಪಡೆ ನಿಯೋಜಿಸಲಾಗುತ್ತಿದೆ ಎಂದು...

ನವದೆಹಲಿ: ಇದೇ ಮೊದಲ ಬಾರಿಗೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 62,779 ಮತಗಟ್ಟೆಗಳಿಗೂ ಕೇಂದ್ರದ ಅರೆಸೇನಾಪಡೆ ನಿಯೋಜಿಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ಚುನಾವಣೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು, 323 ವೀಕ್ಷಕರನ್ನು 243 ಸಾಮಾನ್ಯ ವೀಕ್ಷಕರನ್ನು ಮತ್ತು 80 ಖರ್ಚು ವೀಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೆ ಮತದಾನದ ವೇಳೆ ವಿದ್ಯುತ್ ಕಡಿತವಾದರೆ, ಸೋಲಾರ್ ಲ್ಯಾಂಪ್‌ಗಳನ್ನು ಬಳಸಲಾಗುವುದು ಎಂದು ಆಯೋಗ ಹೇಳಿದೆ.
ಯಾವುದೇ ಒಂದೇ ಒಂದು ಮತಗಟ್ಟೆಯೂ ಬಿಡದಂತೆ ಶೇ.100ರಷ್ಟು ಮತಗಟ್ಟೆಗಳಲ್ಲಿ ಶಸ್ತ್ರಸಜ್ಜಿತ ಅರೆಸೇನಾಪಡೆ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಎಲ್ಲಾ ಮತಗಟ್ಟೆಗಳಲ್ಲೂ ಅರೆಸೇನಾಪಡೆ ನಿಯೋಜಿಸುತ್ತಿರುವುದು ಇದೇ ಮೊದಲು ಎಂದು ಚುನಾವಣಾ ಆಯುಕ್ತ ಒ.ಪಿ.ರಾವತ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿ ಹಾಗೂ ಗೃಹ ರಕ್ಷಕ ಸಿಬ್ಬಂದಿಯನ್ನು ಕ್ಯೂ ನೋಡಿಕೊಳ್ಳಲು ಹಾಗೂ ಇತರೆ ಕಾರ್ಯಗಳಿಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


