ಬಿಹಾರ ಚುನಾವಣೆಯಲ್ಲಿ ಎಲ್‌ಜೆಪಿಗೆ ನೀಡಿದ ಸ್ಥಾನಗಳನ್ನು ನೋಡಿ ಶಾಕ್ ಆಗಿದೆ: ಪಾಸ್ವಾನ್
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಅಸಮಾಧಾನ...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ.
ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ಕ್ಕೆ ಕೇವಲು 40 ಸ್ಥಾನಗಳನ್ನು ನೀಡಿರುವುದನ್ನು ನೋಡಿ ಪಕ್ಷಕ್ಕೆ ಆಘಾತವಾಗಿದೆ. ಆದರೆ ಸ್ಥಾನ ಹಂಚಿಕೆ ಬಗ್ಗೆ ಬೇಸರವಿಲ್ಲ ಎಂದು ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಸ್ವಾನ್, 'ಸೋಮವಾರ ಎನ್‌ಡಿಎ ಮಿತ್ರ ಪಕ್ಷಗಳಿಗೆ ನೀಡಿದ ಸ್ಥಾನಗಳನ್ನು ನೋಡಿ ನಮಗೆ ಆಘಾತವಾಯಿತು' ಎಂದಿದ್ದಾರೆ.
'ಸ್ಥಾನ ಹಂಚಿಕೆ ಬಗ್ಗೆ ಎಲ್‌ಜೆಪಿಗೆ ಸ್ವಲ್ಪ ಅಸಮಾಧಾನ ಇದೆ. ಆದರೆ ಇದರಿಂದ ಬೇಸರ ಏನೂ ಇಲ್ಲ' ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


