ದೇಶ

ಎಎಪಿ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಮಿಸ್ಸಿಂಗ್

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಆಮ್‌ ಆದ್ಮಿ ಪಕ್ಷದ ನಾಯಕ ಸೋಮನಾಥ್‌ ಭಾರ್ತಿ ನಾಪತ್ತೆಯಾಗಿದ್ದಾರೆ....

ಎಎಪಿ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಮಿಸ್ಸಿಂಗ್
ಸೋಮನಾಥ್ ಭಾರ್ತಿ
Published On :

ನವದೆಹಲಿ: ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಆಮ್‌ ಆದ್ಮಿ ಪಕ್ಷದ ನಾಯಕ ಸೋಮನಾಥ್‌ ಭಾರ್ತಿ ನಾಪತ್ತೆಯಾಗಿದ್ದಾರೆ. ದೆಹಲಿ ಮತ್ತು ಆಗ್ರಾದ ಅವರ ಮನೆ ಹಾಗೂ ಕಚೇರಿಯಲ್ಲಿಸೋಮನಾಥ್ ಭಾರ್ತಿ ಸುಳಿವಿಲ್ಲ.

ಸೋಮವಾರ ನ್ಯಾಯಾಲಯ ಸೋಮನಾಥ್ ಭಾರ್ತಿ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ಜಾಮೀನು ರಹಿತ ಬಂಧನಕ್ಕೆ ವಾರೆಂಟ್ ಹೊರಡಿಸಿತ್ತು. ಜಾಮೀನು ಕೋರಿ ಭಾರ್ತಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದಾರೆ.

ಸೋಮನಾಥ್ ಭಾರ್ತಿ ವಿರುದ್ಧ  ಅವರ ಪತ್ನಿ ಲಿಪಿಕಾ ಮಿತ್ರಾ ಕೊಲೆ ಯತ್ನದ ಆರೋಪ ಮಾಡಿದ್ದರು. ಇನ್ನು ಸೋಮನಾಥ್ ಭಾರ್ತಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಆಪ್ ಹಿರಿಯ ಮುಖಂಡ ಅಶುತೋಷ್. ಈ ವಿಷಯ ಭಾರ್ತಿ ಅವರ ವಯಕ್ತಿಕ ವಿಚಾರವಾಗಿದ್ದು, ಇದರಲ್ಲಿ ಎಎಪಿ ಪಕ್ಷ ಮದ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.