ದೇಶ

ಐಎಸ್‌ನೊಂದಿಗೆ ಲಿಂಕ್, ತಿರುವನಂತಪುರಂನಲ್ಲಿ 4 ಯುವಕರ ಬಂಧನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ...

ಐಎಸ್‌ನೊಂದಿಗೆ ಲಿಂಕ್, ತಿರುವನಂತಪುರಂನಲ್ಲಿ 4 ಯುವಕರ ಬಂಧನ
ಸಾಂದರ್ಭಿಕ ಚಿತ್ರ
Published On :

ತಿರುವನಂತಪುರಂ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಬುಧಬಿಯಿಂದ ಆಗಮಿಸಿದ ನಾಲ್ವರು ಶಂಕಿತ ಯುವಕರನ್ನು ಮಂಗಳವಾರ ಬಂಧಿಸಲಾಗಿದೆ.

ಅಬುಧಬಿಯಿಂದ ಕರಿಪುರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ಹಾಗೂ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಯುವಕರನ್ನು ರಾಜ್ಯ ಗುಪ್ತಚರ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಾಲ್ವರು ಯುವಕರು ಮೇಲ್ನೋಟಕ್ಕೆ ಐಎಸ್ ಉಗ್ರರ ಜತೆ ನಂಟು ಇರಿಸಿಕೊಂಡಿರುವುದು ಸಾಬೀತಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಇದೇ ರೀತಿ ಶಂಕಾಸ್ಪದ ವ್ಯಕ್ತಿಗಳಿಬ್ಬರನ್ನು ಮಲಪ್ಪುರಂನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ಅಷ್ಟೇ ಅಲ್ಲ ಈ ಯುವಕರಲ್ಲೊಬ್ಬನ ಸಂಬಂಧಿ ಎನ್ನಲಾದ ಇನ್ನೊಬ್ಬ ಯುವಕನನ್ನು ಈ ನಾಲ್ವರನ್ನು ವಶಕ್ಕೆ ಪಡೆಯುವುದಕ್ಕೂ ಕೆಲವೇ ಗಂಟೆಗಳ ಮೊದಲು ವಿಚಾರಣೆಗೊಳಪಡಿಸಲಾಗಿತ್ತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.