ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಬ್ರಾಹ್ಮಣರ ಬೆದರಿಕೆ
ಉತ್ತರ ಪ್ರದೇಶದ ಬಾಘ್'ಪತ್ ಜಿಲ್ಲೆಯ ಸಿಂಘವಾಲಿ ಆಹಿರ್ ಗ್ರಾಮದ ಸುಮಾರು 150ಕ್ಕೂ ಹೆಚ್ಚು ಮಂದಿ ಬ್ರಾಹ್ಮಣ ಸಮುದಾಯದ ಜನರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಅಧಿಕಾರಿಗಳ ಬಳಿ ಬೆದರಿಕೆ ಒಡ್ಡಿರುವುದಾಗಿ ಬುಧವಾರ ತಿಳಿದುಬಂದಿದೆ...

ಬಾಘ್'ಪತ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಘ್'ಪತ್ ಜಿಲ್ಲೆಯ ಸಿಂಘವಾಲಿ ಆಹಿರ್ ಗ್ರಾಮದ ಸುಮಾರು 150ಕ್ಕೂ ಹೆಚ್ಚು ಮಂದಿ ಬ್ರಾಹ್ಮಣ ಸಮುದಾಯದ ಜನರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಅಧಿಕಾರಿಗಳ ಬಳಿ ಬೆದರಿಕೆ ಒಡ್ಡಿರುವುದಾಗಿ ಬುಧವಾರ ತಿಳಿದುಬಂದಿದೆ.
ಸೆ.8ರಂದು ಗ್ರಾಮದ ಬ್ರಾಹ್ಮಣ ಹುಡುಗಿಯೊಬ್ಬಳನ್ನು ದಲಿತ ಸಮುದಾಯದ ಯುವಕನವೊಬ್ಬ ಅಪಹರಿಸಿದ್ದಾನೆಂದು ಆರೋಪಿಸಿರುವ ಬ್ರಾಹ್ಮಣರು ಅಪಹರಣ ಕುರಿತಂತೆ ಪೊಲೀಸರ ಬಳಿ ದೂರು ನೀಡಿದ್ದಾರೆ. ದೂರು ನೀಡಿ ಹಲವು ದಿನಗಳಗಾದರೂ ಯುವತಿ ಪತ್ತೆಯಾಗದಿರುವುದಕ್ಕೆ ಕೆಂಡಾಮಂಡಲವಾಗಿರುವ ಬ್ರಾಹ್ಮಣ ಸಮುದಾಯದ ಜನರು ನಿನ್ನೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾರನ್ನು ಭೇಟಿ ಮಾಡಿದ್ದಾರೆ.
ಸುಮಾರು 150ಕ್ಕೂ ಹೆಚ್ಚು ಬ್ರಾಹ್ಮಣರು ನನ್ನನ್ನು ಭೇಟಿ ಮಾಡಲೆಂದು ಕಚೇರಿ ಬಳಿ ಬಂದು ಧರಣಿ ನಡೆಸಿದರು. ಈ ವೇಳೆ ತಮ್ಮ ಸಮುದಾಯದ ಯುವತಿಯೋರ್ವಳನ್ನು ದಲಿತ ಯುವಕನೊಬ್ಬ ಸೆ.8ರಂದು ಅಪಹರಿಸಿದ್ದು, ಆಕೆಯನ್ನು ಹುಡುಕಿ ಕರೆತರುವುದಾಗಿ ಒತ್ತಾಯಿಸಿದ್ದರು. ಅಲ್ಲದೆ, ಒಂದು ವೇಳೆ ಯುವತಿಯನ್ನು ಕರೆತರದಿದ್ದರೆ ಸಮುದಾಯದ ಎಲ್ಲಾ ಬ್ರಾಹ್ಮಣರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಬೆದರಿಕೆಯೊಡ್ಡಿದರು ಎಂದು ವರಿಷ್ಠಾಧಿಕಾರಿ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


