ಪೊಲೀಸರೆದುರು ಹಾಜರಾದ ಆಪ್ ಶಾಸಕ ಸೋಮನಾಥ್ ಭಾರ್ತಿ
ಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಸೆ.16 ರಂದು ದೆಹಲಿ ಪೊಲೀಸರೆದುರು ಶರಣಾಗಿದ್ದಾರೆ.

ನವದೆಹಲಿ: ಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಸೆ.16 ರಂದು ದೆಹಲಿ ಪೊಲೀಸರೆದುರು ಶರಣಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಶಾಸಕರಾಗಿರುವ ಸೋಮನಾಥ್ ಭಾರ್ತಿ, ಸೆ.15 ರಂದು ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸೆ.17 ರ ವರೆಗೆ ಬಂಧನದಿಂದ ಮುಕ್ತಿ ದೊರೆತಿತ್ತು. ಆದರೆ ಬಂಧನದ ವಿರುದ್ಧ ರಕ್ಷಣೆ ದೊರೆತ ಮರುದಿನವೇ ಸೋಮನಾಥ್ ಭಾರ್ತಿ ಪೊಲೀಸರೆದುರು ಶರಣಾಗಿದ್ದಾರೆ.
ಪ್ರಕರಣದ ಬಗ್ಗೆ ಪಕ್ಷದ ವರಿಷ್ಠರೊಂದೊದಿಗೆ ಚರ್ಚೆ ನಡೆಸಿದ ಬಳಿಕ ಖುದ್ದು ಸೋಮನಾಥ್ ಭಾರ್ತಿ ಅವರೇ ಪೊಲೀಸ್ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿ ಶರಣಾಗಿದ್ದಾರೆ. ಒಂದು ವೇಳೆ ಬಂಧಿಸಿದರೆ, ಸೋಮನಾಥ್ ಭಾರ್ತಿ ಅವರು ಬಂಧನಕ್ಕೊಳಗಾದ ಆಮ್ ಆದ್ಮಿ ಪಕ್ಷದ 4 ಶಾಸಕರಾಗಲಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಜಿತೇಂದ್ರ ತೋಮರ್, ಮನೋಜ್ ಕುಮಾರ್, ಸುರೀಂದರ್ ಸಿಂಗ್ ವಿವಿಧ ಪ್ರಕರಣಗಳಲ್ಲಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


