ದೇಶ

ಲಂಕಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ನಿರ್ಣಯ ಮಂಡಿಸಿ: ಕೇಂದ್ರಕ್ಕೆ ತಮಿಳುನಾಡು ಒತ್ತಡ

ತಮಿಳುನಾಡಿನವರ ವಿರುದ್ಧ ಯುದ್ಧ ಅಪರಾಧವೆಸಗಿರುವ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ತನಿಖೆ ನಡೆಸಲು ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಮಂಡಿಸಬೇಕೆಂದು ತಮಿಳುನಾಡು ಸರ್ಕಾರ ಒತ್ತಾಯಿಸಿದೆ

ಲಂಕಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ನಿರ್ಣಯ ಮಂಡಿಸಿ: ಕೇಂದ್ರಕ್ಕೆ ತಮಿಳುನಾಡು ಒತ್ತಡ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತ
Published On :

ಚೆನ್ನೈ:ತಮಿಳುನಾಡಿನವರ ವಿರುದ್ಧ ಯುದ್ಧ ಅಪರಾಧವೆಸಗಿರುವ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ತನಿಖೆ ನಡೆಸಲು ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಮಂಡಿಸಬೇಕೆಂದು  ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ತನಿಖೆ ನಡೆಸುವುದಕ್ಕೆ ತಮಿಳುನಾಡು ವಿಧಾನಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಲಂಕಾ ವಿರುದ್ಧ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಮಂಡಿಸಲು ವಿಧಾನಸಭಾ ಸದಸ್ಯರು ಆಗ್ರಹಿಸಿದ್ದಾರೆ. ತಮಿಳುನಾಡಿನ ನಾಗರಿಕರ ಮೇಲೆ ಶ್ರೀಲಂಕಾ ನಡೆಸಿರುವ ಮಾನವಹಕ್ಕು ಉಲ್ಲಂಘನೆ ಹಾಗೂ ಯುದ್ಧ  ಅಪರಾಧಗಳ ಬಗ್ಗೆ ಆಂತರಿಕ ತನಿಖೆಗೆ ಅಮೇರಿಕಾ ಸಹ ಒಲವು ವ್ಯಕ್ತಪಡಿಸಿತ್ತು. ಆದರೆ ಇದನ್ನು ಖಂಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತ, ಅಮೆರಿಕಾದ ನಿಲುವು ಸಹಜ ನ್ಯಾಯಕ್ಕೆ ವಿರುದ್ಧವಾಗಿದ್ದು, ನಿಲುವು ಬದಲಾಯಿಸಿಕೊಳ್ಳುವಂತೆ ಭಾರತ ಅಮೆರಿಕಾಗೆ ಒತ್ತಾಯ ಮಾಡಬೇಕು ಎಂದು ಹೇಳಿದ್ದಾರೆ.
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಭಾರತಕ್ಕೆ ಪ್ರಥಮ ಭೇಟಿ ನೀಡಿದ್ದು, ಭಯೋತ್ಪಾದನೆ ನಿಗ್ರಹ, ಭದ್ರತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಶ್ರೀಲಂಕಾ ಪ್ರಧಾನಿ ಭಾರತ ಭೇಟಿ ವೇಳೆಯಲ್ಲೇ ತಮಿಳುನಾಡು ಸರ್ಕಾರ ಅಂತಾಷ್ಟ್ರೀಯ ತನಿಖೆಗೆ ಒತ್ತಡ ಹೇರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.