ನೇತಾಜಿ ಕಡತಗಳ ಬಹಿರಂಗ, ವಿವಾದ ಸೃಷ್ಟಿಸುವ ಅಗತ್ಯ ಇರಲಿಲ್ಲ: ಕಾಂಗ್ರೆಸ್
ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ನಿರ್ಧಾರವನ್ನು ಕಾಂಗ್ರೆಸ್ ಶುಕ್ರವಾರ ಸ್ವಾಗತಿಸಿದೆ. ಆದರೆ ಈ ಬಗ್ಗೆ...

ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸುವ ನಿರ್ಧಾರವನ್ನು ಕಾಂಗ್ರೆಸ್ ಶುಕ್ರವಾರ ಸ್ವಾಗತಿಸಿದೆ. ಆದರೆ ಈ ಬಗ್ಗೆ ವಿವಾದ ಸೃಷ್ಟಿಸುವ ಅಗತ್ಯ ಇರಲಿಲ್ಲ ಎಂದು ಹೇಳಿದೆ.
ನೇತಾಜಿ ಕಡತಗಳಿಗೆ ಸಂಬಂಧಿಸಿದ ವಿವಾದಗಳೆಲ್ಲ ಅನಗತ್ಯವಾಗಿತ್ತು ಮತ್ತು ಅವರು ರಾಜಕೀಯ ಲಾಭಕ್ಕಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಸರ್ಕಾರದ ಬಳಿ ಎಲ್ಲಾ ಕಡತಗಳಿವೆ. ಅವನ್ನು ಯಾವಾಗ ಬೇಕಾದರೂ ಅವರು ಬಹಿರಂಗ ಮಾಡಬಹುದು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದಿಕ್ಷಿತ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
'ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಹಿರಂಗದಿಂದ ನಮಗೆ ಗೊತ್ತಿಲ್ಲದ ಹೊಸ ವಿಚಾರಗಳು ಬೆಳಕಿಗೆ ಬರಬಹುದು' ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವೂ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕೆ? ಎಂಬ ಪ್ರಶ್ನೆಗೆ ಉತ್ತರ ದಿಕ್ಷಿತ್, ಈ ಬಗ್ಗೆ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು. ಬಹಿರಂಗಪಡಿಸದಿರುವುದಕ್ಕೆ ಕಾರಣ ಏನು ಎಂಬುದು ಅವರಿಗೆ ಗೊತ್ತು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


