1945ರ ನಂತರವೂ ನೇತಾಜಿ ಬದುಕಿದ್ದರು ಎಂಬುದು ಕಡತಗಳಿಂದ ಬಹಿರಂಗ: ಮಮತಾ
ನೇತಾಜಿ ಸುಭಾಷ್ಚಂದ್ರ ಬೋಸ್ ಅವರು 1945ರ ನಂತರವೂ ಬದುಕಿದ್ದರು ಎಂಬುದುಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕಡತಗಲ್ಲಿರುವ...

ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1945ರ ನಂತರವೂ ಬದುಕಿದ್ದರು ಎಂಬುದುಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕಡತಗಳಲ್ಲಿರುವ ಅಂಶಗಳು ಪುಷ್ಟಿ ನೀಡುತ್ತಿವೆ ಮತ್ತು ಇದಕ್ಕಾಗಿಯೇ ಅವರ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಹೇಳಿದ್ದಾರೆ.
'ನಾನು ದಾಖಲೆಗಳನ್ನು ಪರಿಶೀಲಿಸಿದ್ದೇನೆ. ನೇತಾಜಿ ಕುಟುಂಬದ ವಿರುದ್ಧ ಬೇಹುಗಾರಿಕೆ ನಡೆಸಿರುವುದು ಸ್ಪಷ್ಟವಾಗಿ ತಿಳಿದುಬರುತ್ತದೆ' ಎಂದು ಮಮತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸ್ವಾತಂತ್ರ್ಯ ನಂತರ ನೇತಾಜಿ ಅವರಿಗೆ ಸೂಕ್ತ ಗೌರವ ಸಿಗದಿರುವುದು ಮತ್ತು ಅವರ ಕುಟುಂಬದ ವಿರುದ್ಧವೇ ಬೇಹುಗಾರಿಗೆ ನಡೆಸಿರುವುದು 'ದುರದೃಷ್ಟಕರ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ.
'1945ರ ವಿಮಾನ ದುರಂತದ ನಂತರವೂ ನೇತಾಜಿ ಅವರು ಬದುಕಿದ್ದರು ಎಂದು ಕೆಲವು ಪತ್ರಗಳು ಹೇಳುತ್ತವೆ' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


