ಅಭಿವೃದ್ಧಿಯಲ್ಲಿ ಗುಜರಾತ್ ನಂ.1, ಬಿಹಾರ 21: ಅರುಣ್ ಜೇಟ್ಲಿ
ಅಭಿವೃದ್ಧಿ ವಿಷಯದಲ್ಲಿ ಗುಜರಾತ್ ನಂ.1, ಬಿಹಾರ 21 ನೇ ಸ್ಥಾನ ಪಡೆದುಕೊಂಡಿದೆ ಎಂದು ಜೇಟ್ಲಿ, ನಿತೀಶ್ ಕುಮಾರ್ ಅವರ ಹೇಳಿಕೆಗೆ...

ನವದೆಹಲಿ: ದೇಶದಲ್ಲಿ ಯಾವ ರಾಜ್ಯದಲ್ಲಿ ಎಷ್ಟೆಷ್ಟು ಅಭಿವೃದ್ಧಿ ಆಗಿದೆ ಎಂಬುದರ ಬಗ್ಗೆ ಚರ್ಚೆ ನಡೆಯಬೇಕು ಎಂದು ಪಟ್ಟು ಹಿಡಿದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಖಡಕ್ ಉತ್ತರ ನೀಡಿದ್ದಾರೆ.
ಅಭಿವೃದ್ಧಿ ವಿಷಯದಲ್ಲಿ ಗುಜರಾತ್ ನಂ.1, ಬಿಹಾರ 21 ನೇ ಸ್ಥಾನ ಪಡೆದುಕೊಂಡಿದೆ ಎಂದು ಜೇಟ್ಲಿ, ನಿತೀಶ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಅವರು ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸಿ ರಾಮ್ ಮನೋಹರ್ ಲೋಹಿಯಾ ಅವರ ಪರಂಪರೆಯನ್ನು ಹಾಳುಗೆಡವುತ್ತಿದ್ದಾರೆ. ಈ ಇಬ್ಬರೂ ನಾಯಕು 25 ವರ್ಷಗಳಿಂದ ರಾಜ್ಯವನ್ನಾಳಿದರೂ ರಾಜ್ಯದಲ್ಲಿ ಅಭಿವೃದ್ಧಿಯನ್ನುಂಟು ಮಾಡಲು ವಿಫಲರಾಗಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.
ನಿತೀಶ್‌ಜೀ ಅವರು ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡೋಣ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಏನಿದೆ? ಈ ಬಗ್ಗೆ ಚರ್ಚೆ ಮುಗಿದಿದೆ. ಅಭಿವೃದ್ಧಿ ವಿಷಯದಲ್ಲಿ ಗುಜರಾತ್ ನಂ.1 ಮತ್ತು ಬಿಹಾರ 21ನೇ ಸ್ಥಾನದಲ್ಲಿದೆ. ಆರ್ಥಿಕತೆಯನ್ನು ಸ್ಟಾಟಿಸ್ಟಿಕ್ಸ್ ಮೂಲಕ ಹೇಳಲಾಗುತ್ತದೆಯೇ ಹೊರತು ಚರ್ಚೆಗಳ ಮೂಲಕ ಅಲ್ಲ ಎಂದು ಜೇಟ್ಲಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ಪ್ರಯುಕ್ತ ಬಿಜೆಪಿಯ ಯುವದಳ ಬಿಜೆವೈಎಂ ನೇತೃತ್ವದಲ್ಲಿ ದೇಶದಾದ್ಯಂತ ನಡೆದು ಬರುತ್ತಿರುವ ಪಂಚ್‌ಕ್ರಾಂತಿ ಅಭಿಯಾನ್ ಉದ್ಘಾಟಿಸಿ ಮಾತನಾಡುತ್ತಿದ್ದರು ಜೇಟ್ಲಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


