ಪ್ರಧಾನಿ ಮೋದಿ-ಒವೈಸಿ ರಹಸ್ಯ ಒಪ್ಪಂದ: ಜೆಡಿಯು ಆರೋಪ
ಬಿಹಾರ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಜೆಡಿಯು ಪಕ್ಷದ ಮುಖಂಡರು ಆರೋಪಿಸಿದ್ದಾರೆ.

ಪಾಟ್ನಾ: ಬಿಹಾರ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಜೆಡಿಯು ಪಕ್ಷದ ಮುಖಂಡರು ಆರೋಪಿಸಿದ್ದಾರೆ.
ಮಾಧ್ಯಮ ಸಮೂಹವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಜೆಡಿಯು ಮುಖಂಡ ಕೆಸಿ ತ್ಯಾಗಿ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಎಂಐಎಂ ಮುಖ್ಸ್ಥ ಅಸಾದುದ್ದೀನ್ ಒವೈಸಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇವರು ಯಾವ ಉದ್ದೇಶದಿಂದ ಭೇಟಿಯಾಗಿದ್ದರು ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. "ಜೆಡಿಯು ಮತ್ತು ಆರ್ ಜೆಡಿ ಪಕ್ಷಗ "ಮಹಾಘಟಬಂಧನ" ಮೈತ್ರಿಯನ್ನು ಸೋಲಿಸುವ ಸಲುವಾಗಿ ಪ್ರಧಾನಿ ಮೋದಿ ಈ ವಾಮಮಾರ್ಗವನ್ನು ಅನುಸರಿಸುತ್ತಿದ್ದು, ರಹಸ್ಯವಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತ್ಯಾಗಿ ಆರೋಪಿಸಿದ್ದಾರೆ.
ಚುನಾವಣಾ ಆಯೋಗದಿಂದ ಬಿಹಾರ ಚುನಾವಣಾ ದಿನಾಂಕ ಘೋಷಣೆಯಾಗುವುದಕ್ಕೂ ಮೊದಲು ಎಐಎಂಐಎಂ (All India Majlis-e-Ittehadul Muslimeen) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿತ್ತು. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಅಸಾದುದ್ದೀನ್ ಮುಸ್ಲಿಂ ಮತದಾರರು ಹೆಚ್ಚಿರುವ ಸೀಮಾಂಚಲ ಪ್ರದೇಶದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದ್ದರು. ಈ ವಿಚಾರ ಇದೀಗ ಜೆಡಿಯು ಕೆಂಗಣ್ಣಿಗೆ ಗುರಿಯಾಗಿದ್ದು, ಮೋದಿ-ಒವೈಸಿ ಭೇಟಿ ರಹಸ್ಯ ಒಪ್ಪಂದವಡಗಿದೆ ಎಂದು ಆ ಪಕ್ಷ ಆರೋಪಿಸಿದೆ.
243 ಸದಸ್ಯ ಬಲದ ಬಿಹಾರ ವಿಧಾನ ಸಭಾ ಚುನಾವಣೆ ಅಕ್ಟೋಬರ್ 12 ರಿಂದ ನವಂಬರ್ 5 ರ ವರೆಗೆ ನಡೆಯಲಿದ್ದು, ನವಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಹಾರ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಬಿಜೆಪಿ ಈ ಭಾರಿ ಹೇಗಾದರೂ ಆಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಹಂಬಲಿಸುತ್ತಿದ್ದರೆ. ಇತ್ತ ಆಡಳಿತಾರೂಢ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಬಿಟ್ಟುಕೊಡದೇ ಇರಲು ಆರ್ ಜೆಡಿ ಪಕ್ಷದೊಂದಿಗೆ ಮಹಾ ಮೈತ್ರಿ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


