ಎಎಪಿಯ ಎಲ್ಲಾ ಹುದ್ದೆಗಳಿಗೆ ಹಿರಿಯ ನಾಯಕ ಎಚ್ ಎಸ್ ಫೂಲ್ಕಾ ರಾಜೀನಾಮೆ
ಆಪ್ ನ ಎಲ್ಲಾ ಹುದ್ದೆಗಳಿಗೂ ವಕೀಲ ಹಾಗೂ ಹಿರಿಯ ನಾಯಕ ಎಚ್ ಎಸ್ ಫೂಲ್ಕಾ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಆಪ್ ನ ಎಲ್ಲಾ ಹುದ್ದೆಗಳಿಗೂ ವಕೀಲ ಹಾಗೂ ಹಿರಿಯ ನಾಯಕ ಎಚ್ ಎಸ್ ಫೂಲ್ಕಾ ರಾಜೀನಾಮೆ ನೀಡಿದ್ದಾರೆ.
1984 ರ ಸಿಖ್ ಗಲಭೆ ಸಂಬಂಧಿತ ಪ್ರಕರಣಗಳಲ್ಲಿ ಗಮನ ಹರಿಸಲು ತಾವು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಸಿಖ್ ಗಲಭೆ ಪ್ರಕರಣ ಅಂತಿಮ ಹಂತ ತಲುಪಿದ್ದು, ತಾವು ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ತಾವು ಪಕ್ಷದ ಒಂದು ಭಾಗವಾಗಿ ಯಾವಾಗಲೂ ಇರುವುದಾಗಿ ಫೂಲ್ಕಾ ಹೇಳಿದ್ದಾರೆ. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಮತದಿಂದ ಬೇಸರಗೊಂಡು ಫೂಲ್ಕ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿ ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ ಅವರು ಮುಂದಿನ ಪಂಜಾಬ್ ಲೋಕಸಭೆ ಚುನಾವಣೆಯಲ್ಲಿ ಆಪ್ ಜಯಗಳಿಸುವ ವಿಶ್ವಾಸ ವ್ಯಕ್ತ ಪಡಿಸಿದರು.ಆ ವೇಳೆ ಮತ್ತೆ ತಾವು ಪಕ್ಷದಲ್ಲಿ ಸಕ್ರಿಯವಾಗಿ ಪಾಲ್ಗೋಳ್ಳುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


