ಆಸಾರಾಂ ವಿರುದ್ಧದ ಸಾಕ್ಷಿಗಳ ಮೇಲೆ ದಾಳಿ, ಇಬ್ಬರ ಬಂಧನ
ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೋಧ್ ಪುರ್ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಸಾಕ್ಷಿಗಳ...

ಅಹಮದಾಬಾದ್: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೋಧ್ ಪುರ್ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಸಾಕ್ಷಿಗಳ ಮೇಲೆ ದಾಳಿ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ.
ಅಸಾರಾಂ ಬಾಪು ಪ್ರಕರಣ ಸಂಬಂಧ 7 ಸಾಕ್ಷಿಗಳ ಮೇಲೆ ಇದುವರೆಗೂ ದಾಳಿ ನಡೆದಿತ್ತು. ಹೀಗಾಗಿ ಕಳೆದ ವಾರ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ಸಾಕ್ಷಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
16 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ ಪುರ ಸೆಷನ್ಸ್ ನ್ಯಾಯಾಲಯ ಅಸಾರಾಂ ಬಾಪು ವಿಚಾರಣೆ ನಡೆಸುತ್ತಿದೆ. ಇನ್ನು ಸೂರತ್ ಮೂಲದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ನಗರ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಇಬ್ಬರು ಸಹೋದರಿಯರ ಮೇಲೆ ಅತ್ಯಾತಾರ ನಡೆಸಿದ ಮತ್ತೊಂದು ಪ್ರಕರಣದಲ್ಲಿ ಅಸಾರಾಂ ಬಾಪು ಮತ್ತು ಆತನ ಪುತ್ರ ನಾರಾಯಣ ಸಾಯಿ ವಿರುದ್ಧ ಸೂರತ್ ನ್ಯಾಯಾಲಯ ಕೂಡ ವಿಚಾರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


