ತುರ್ತು ನಿಗಾ ಘಟಕದಿಂದ ವೈದ್ಯನನ್ನು ಎಳೆದು ಹಿಗ್ಗಾಮಗ್ಗಾ ಥಳಿತ
ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ತಲುಪಿಲ್ಲ ಎಂದು ಆರೋಪಿಸಿ ಗುಂಪೊಂದು ವೈದ್ಯರ ಮೇಲೆ ಮಾರಾಣಾಂತಿಕವಾಗಿ...

ಸಿತಾಪುರ್: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ತಲುಪಿಲ್ಲ ಎಂದು ಆರೋಪಿಸಿ ಗುಂಪೊಂದು ವೈದ್ಯರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಸೀತಾಪುರ್ ನಲ್ಲಿ ನಡೆದಿದೆ.
ಸರಿಯಾದ ಸಮಯದಲ್ಲಿ ಆ್ಯಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ರೋಗಿಯ ಸಂಬಂಧಿಕರು ವೈದ್ಯರನ್ನಾ ತುರ್ತು ನಿಗಾ ಘಟಕದಿಂದ ಹೊರಗೆಳೆದು ಹಿಗ್ಗಾಮಗ್ಗಾ ಥಳಿಸಿದ್ದಾರೆ.
ವೈದ್ಯರಿಗೆ ಹೊಡೆಯುತ್ತಿರುವ ದೃಶ್ಯವನ್ನು ಆಸ್ಪತ್ರೆಯಲ್ಲಿ ಇದ್ದ ಒಬ್ಬ ವ್ಯಕ್ತಿ ಚಿತ್ರೀಕರಿಸಿದ್ದು, ವ್ಯಾಟ್ಸಾಪ್ ನಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಆಧಾರವಾಗಿಟ್ಟುಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


