ದೇಶ

ಕೇಂದ್ರ ಸರ್ಕಾರ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕು: ಮಮತಾ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ...

ಕೇಂದ್ರ ಸರ್ಕಾರ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕು: ಮಮತಾ
ಮಮತಾ ಬ್ಯಾನರ್ಜಿ
Published On :

ಕೋಲ್ಕತಾ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನೇ ಕೇಂದ್ರ ಅನುಸರಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

'ನಾವು ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿದ್ದೇವೆ. ನೇತಾಜಿ ಅವರ ಅಪಾರ ಕೊಡುಗೆಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಹಾಗೆ ಎಲ್ಲಾ ಕಡತಗಳನ್ನು ಬಹಿರಂಗಪಡಿಸಬೇಕು' ಎಂದು ಬ್ಯಾನರ್ಜಿ ವಿಧಾಸಭೆಯಲ್ಲಿ ಹೇಳಿದ್ದಾರೆ.

1937ರಿಂದ 47ರವರೆಗೆ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಿಸಿದ ಕಡತಗಳನ್ನು ಡಿಜಿಟಲೈಸ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಪಶ್ಚಿಮ ಬಂಗಾಳ ಸರ್ಕಾರ ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.