ದೇಶ

ಎನ್‌ಆರ್‌ಎಚ್‌ಎಂ ಹಗರಣ: ಕೇಂದ್ರದಿಂದ ಸಿಬಿಐ ದುರ್ಬಳಕೆ; ಮಾಯಾವತಿ

ಬಹುಕೋಟಿ ಎನ್‌ಆರ್‌ಎಚ್‌ಎಂ ಹಗರಣಕ್ಕೆ ಸಂಬಂಧಿಸಿದಂತೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ...

ಎನ್‌ಆರ್‌ಎಚ್‌ಎಂ ಹಗರಣ: ಕೇಂದ್ರದಿಂದ ಸಿಬಿಐ ದುರ್ಬಳಕೆ; ಮಾಯಾವತಿ
ಮಾಯಾವತಿ
Published On :

ನವದೆಹಲಿ: ಬಹುಕೋಟಿ ಎನ್‌ಆರ್‌ಎಚ್‌ಎಂ ಹಗರಣಕ್ಕೆ ಸಂಬಂಧಿಸಿದಂತೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಗರಣ ಸಂಬಂಧ ಬಿಎಸ್‌ಪಿ ಮುಖ್ಯಸ್ಥೆಯನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ನಿರ್ಧರಿಸಿದ್ದು, ಈ ಬಗ್ಗೆ ಮಾಯಾವತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್(ಎನ್‌ಆರ್‌ಎಚ್‌ಎಂ) ಹಗರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಆದರೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ದುರುದ್ದೇಶದಿಂದ ಕೇಂದ್ರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ವಿರುದ್ಧದ ಸಿಬಿಐ ತನಿಖೆಯ ಸಮಯವನ್ನು ಪ್ರಶ್ನಿಸಿರುವ ಮಾಯಾವತಿ, ಇದು ರಾಜಕೀಯವಾಗಿ ನನ್ನನ್ನು 'ಮುಗಿಸುವ' ಯತ್ನ ಮತ್ತು ಸರ್ಕಾರದ ವೈಫಲ್ಯಗಳ ಕುರಿತ ಜನರ ಗಮನವನ್ನು ಬೇರೆ ಕಡೆಗೆ ಸೆಳೆಯು ತಂತ್ರ ಅಷ್ಟೆ ಎಂದಿದ್ದಾರೆ.

ಸಿಬಿಐನ ಈ ನಿರ್ಧಾರದ ಹಿಂದೆ 'ಜಾತಿವಾದಿ' ಅಧಿಕಾರಿಯೊಬ್ಬರ ಕೈವಾಡ ಇದ್ದು, ಅವರು ದಲಿತ ಮತ್ತು ಹಿಂದು ವರ್ಗಗಳನ್ನು ತುಳಿಯಲು ಯತ್ನಿಸುತ್ತಿದ್ದಾರೆ ಎಂದು ಮಾಯಾವತಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.