1965ರ ಭಾರತ-ಪಾಕ್ ಯುದ್ಧ: ಹುತಾತ್ಮ ಯೋಧರಿಗೆ ಪ್ರಧಾನಿ ಶ್ರದ್ಧಾಂಜಲಿ
1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ನವದೆಹಲಿ: 1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಪ್ರಧಾನಿ ಮೋದಿ ಅವರು ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ಭಾರತೀಯ ಭೂಸೇನಾ ಮುಖ್ಯಸ್ಥ ಜನರನ್ ದಲ್ಜೀರ್ ಸಿಂಗ್ ಸುಹಾಗ್, ವಾಯುಪಡೆ ಮುಖ್ಯಸ್ಥ ಎರ್‌ಚೀಫ್ ಮಾರ್ಷಲ್ ಅರುಪ್ ರಾಹಾ , ನೌಕಾಪಡೆ ಮುಖ್ಯಸ್ಥ ಎಡ್ಮಿರಲ್ ಆರ್.ಕೆ ಧೋವನ್ ಉಪಸ್ಥಿತರಿದ್ದರು.
1965 ರಲ್ಲಿ ಭಾರತ ಪಾಕ್ ನಡುವಿನ ಯುದ್ಧ ಸೆಪ್ಟಂಬರ್ 23 ರಂದು ಭಾರತದ ಗೆಲುವಿನೊಂದಿಗೆ ಮುಕ್ತಾಯಗೊಂಡಿತ್ತು. ಯುದ್ಧ ಗೆದ್ದ ಸಂಭ್ರಮಕ್ಕೆ ಇಂದಿಗೆ 50 ವರ್ಷ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


