ದೇಶ

2006ರ ಮುಂಬೈ ರೈಲು ಸ್ಫೋಟ ಪ್ರಕರಣ: 8 ಅಪರಾಧಿಗಳಿಗೆ ಗಲ್ಲು ಶಿಕ್ಷೆ

2006 ಮುಂಬೈ ರೈಲು ಸ್ಫೋಟ ಪ್ರಕರಣ ಸಂಬಂಧ ಇಂದು ಮೋಕಾ ನ್ಯಾಯಾಲಯ ಅಪರಾಧಿಗಳ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 8 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವ...

2006ರ ಮುಂಬೈ ರೈಲು ಸ್ಫೋಟ ಪ್ರಕರಣ: 8 ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಸಾಂದರ್ಭಿಕ ಚಿತ್ರ
Published On :

ಮುಂಬಯಿ: 2006 ಮುಂಬೈ ರೈಲು ಸ್ಫೋಟ ಪ್ರಕರಣ ಸಂಬಂಧ ಇಂದು ಮೋಕಾ ನ್ಯಾಯಾಲಯ ಅಪರಾಧಿಗಳ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 8 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವ ಕೋರ್ಟ್ ಅಪರಾಧಿಗಳನ್ನು ಸಾವಿನ ವ್ಯಾಪಾರಿಗಳು ಎಂದು ಜರಿದಿದೆ.

2006ರಲ್ಲಿ ಸಂಭವಿಸಿದ ಮುಂಬೈ ಉಪನಗರ ರೈಲು ಸ್ಫೋಟದಲ್ಲಿ 188 ಮಂದಿ ಈ ಘಟನೆಯಲ್ಲಿ ಸಾವನ್ನಪ್ಪಿದ್ದರು. ವಿಶೇಷ "ಮೋಕಾ' (ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕೋರ್ಟ್‌ ಇಂದು ತೀರ್ಪು ನೀಡಿದೆ.

ಮೋಕಾ ಕೋರ್ಟ್‌ ನ್ಯಾಯಾಧೀಶ ಯತಿನ್‌ ಡಿ. ಶಿಂಧೆ ಅವರು ಪ್ರಕರಣದ ವಿಚಾರಣೆಯನ್ನು ಕಳೆದ ವರ್ಷ ಆ.19ರಂದು ಅಂತ್ಯಗೊಳಿಸಿದ್ದರು. ಕಳೆದ 8 ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಲಾಗಿದ್ದು, ಪ್ರಾಸಿಕ್ಯೂಷನ್‌ ಪರ 192 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿತ್ತು. ಸಾಕ್ಷಿಗಳ ಹೇಳಿಕೆಗಳನ್ನು 5500 ಪುಟಗಳಲ್ಲಿ ದಾಖಲಿಸಲಾಗಿತ್ತು. ಪ್ರಕರಣದಲ್ಲಿ 13 ಆರೋಪಿಗಳು ಬಂಧಿತರಾಗಿದ್ದು, ಅಜಂ ಚೀಮಾ ಸೇರಿ 14 ಮಂದಿ ಇನ್ನೂ ನಾಪತ್ತೆಯಾದ್ದಾರೆ.

2006 ಜು.11ರಂದು ಮುಂಬೈ ಉಪನಗರ ರೈಲಿನಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. ಖಾರ್‌ರೋಡ್‌-ಸಾಂತಾಕ್ರೂಜ್‌ ಮತ್ತು ಬೊರಿವಲಿ ಮಧ್ಯೆ ವಿವಿಧೆಡೆ 7 ಆರ್‌ಡಿಎಕ್ಸ್‌ಗಳು ಸ್ಫೋಟಿಸಿ 829 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.