ನಗರಗಳಿಗೆ ನೀರು ಪೂರೈಕೆ ಖಾಸಗಿಗೆ?
ದೇಶದ ನಗರ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಗರಗಳಲ್ಲೂ ಸರ್ಕಾರಿ ಖಾಸಗಿ...

ನವದೆಹಲಿ: ದೇಶದ ನಗರ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಗರಗಳಲ್ಲೂ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನೀರು ಪೂರೈಸುವ ಯೋಜನೆಯನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಸಿದ್ಧಪಡಿಸಿದೆ.
ಪ್ರಸ್ತಾವಿತ 100 ಸ್ಮಾರ್ಟ್ ಸಿಟಿಗಳು ಮತ್ತು ಅಮೃತ್ ಯೋಜನೆಯಡಿ ಬರುವ 500 ನಗರಗಳಲ್ಲಿ ಮೊದಲಿಗೆ ಈ ಯೋಜನೆ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ. ಮುಂದಿನ ಕೆಲವೇ ತಿಂಗಳಲ್ಲಿ ಇದರ ಮಾದರಿಯು ಅಂತಿಮಗೊಳ್ಳಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಈ ಯೋಜನೆ ಜಾರಿಯಾದರೆ, ನೀರು ಪೂರೈಕೆಯ ನಿಗದಿತ ಶುಲ್ಕ, ಮನೆ ಮನೆಗೂ ನೀರಿನ ಸಂಪರ್ಕ ಸೇರಿದಂತೆ ಬಹುತೇಕ ವಿಚಾರಗಳಲ್ಲಿ ಖಾಸಗಿಯವರೇ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


