ಪ್ರಧಾನಿಗೂ ಮುನ್ನ ಅಮೆರಿಕಾಗೆ ಹಾರಿದ ರಾಹುಲ್ ಗಾಂಧಿ
ಸಂಸತ್ ಅಧಿವೇಶನದ ಸಮಯದಲ್ಲಿ 56 ದಿನಗಳ ಕಾಲ ಕಣ್ಮರೆಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಯಾವುದೇ ಮುನ್ಸೂಚನೆ ...

ನವದೆಹಲಿ: ಸಂಸತ್ ಅಧಿವೇಶನದ ಸಮಯದಲ್ಲಿ 56 ದಿನಗಳ ಕಾಲ ಕಣ್ಮರೆಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಯಾವುದೇ ಮುನ್ಸೂಚನೆ ಇಲ್ಲದೇ ಸೋಮವಾರ ರಾತ್ರಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಮೇರಿಕ ಪ್ರವಾಸ ಕೈಗೊಳ್ಳುತ್ತಿರುವ ಮೊದಲೇ ರಾಹುಲ್ ಅಮೆರಿಕಕ್ಕೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ ಅಮೆರಿದ ಆಸ್ಪೆನ್ ಸಮ್ಮೇಳನದಲ್ಲಿ ಭಾಗವಹಿಸಿಲು ರಾಹುಲ್ ಗಾಂಧಿ ತೆರಳಿದ್ದಾರೆ ಎನ್ನಲಾಗುತ್ತಿದ್ದು. ಆಸ್ಪೆನ್ ನಲ್ಲಿ ಪ್ರಪಂಚದ ಎಲ್ಲಾ ದೇಶಗಳ ಮುಖಂಡರ ಸಮ್ಮೇಳನ ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸಲು ರಾಹುಲ್ ತೆರಳಿದ್ದಾರೆ ಎನ್ನಲಾಗಿದೆ.
ಬಿಹಾರದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಈ ಪ್ರವಾಸ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದೂ. ಅದಷ್ಟು ಶೀಘ್ರವೇ ಭಾರತಕ್ಕೆ ಮರಳಿ ಬಿಹಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅಮೆರಿಕದಿಂದ ಭಾರತಕ್ಕೆ ಯಾವಾಗ ಬರುತ್ತಾರೆ ಎಂಬ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


