ಇವಿಎಂ, ಮತ ಪತ್ರದಲ್ಲಿನ ಚುನಾವಣಾ ಚಿಹ್ನೆ ತೆಗೆದುಹಾಕಿ: ಅಣ್ಣಾ ಹಜಾರೆ
ಮತ ಪತ್ರ ಹಾಗೂ ಇವಿಎಂನಲ್ಲಿರುವ ಚುನಾವಣೆ ಚಿಹ್ನೆಯನ್ನು ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ...

ಮುಂಬೈ: ಮತ ಪತ್ರ ಹಾಗೂ ಇವಿಎಂನಲ್ಲಿರುವ ಚುನಾವಣೆ ಚಿಹ್ನೆಯನ್ನು ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಕೇಳಿಕೊಂಡಿದ್ದಾರೆ.
ರಾಳೆಗಣ್‌ಸಿದ್ದಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾ ಹಜಾರೆ, ಓದಲು ಬಾರದ ಮತದಾರರಿಗೆ ಚುನಾವಣಾ ಚಿಹ್ನೆ ಬೇಕಾಗಿತ್ತು. ಆದರೆ ಈಗ ಚುನಾವಣಾ ಆಯೋಗ ಇವಿಎಂನಲ್ಲಿ ಹಾಗೂ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಿಸಲು ನಿರ್ಧರಿಸಿರುವುದರಿಂದ ಚಿಹ್ನೆಯ ಅಗತ್ಯ ಇಲ್ಲ ಎಂದಿದ್ದಾರೆ.
ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿರುವ ಅಣ್ಣಾ ಹಜಾರೆ ಅವರು, ಇವಿಎಂ ಹಾಗೂ ಮತ ಪತ್ರ ಎರಡರಲ್ಲೂ ಚುನಾವಣಾ ಚಿಹ್ನೆ ಹಾಗೂ ಭಾವಚಿತ್ರ ಎರಡು ಇದ್ದರೆ ಅಭ್ಯರ್ಥಿಗಳಿಗೆ ಗೊಂದಲವಾಗುತ್ತದೆ. ಹೀಗಾಗಿ ಚಿಹ್ನೆ ತೆಗೆದುಹಾಕುವಂತೆ ಕೇಳಿಕೊಂಡಿದ್ದಾರೆ.
ಚುನಾವಣಾ ಚಿಹ್ನೆ ತೆಗೆದು ಹಾಕುವುದರಿಂದ ಮುಕ್ತ ಹಾಗೂ ಪಾರದರ್ಶಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ. ಅಲ್ಲದೆ ಚುನಾವಣಾ ಸುಧಾರಣೆಗಾಗಿ ದೇಶಾದ್ಯಂತ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


